ಜನ ಮನದ ನಾಡಿ ಮಿಡಿತ

Advertisement

ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ, ಕೆ. ಮಹಮ್ಮದ್ ಸದಸ್ಯತ್ವ ರದ್ದು..!!

ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕೊಲೆ ಪ್ರಕರಣದ ಆರೋಪಿ, ಪ್ರಸ್ತುತ ಜೈಲಿನಲ್ಲಿರುವ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಕೆ. ಮಹಮ್ಮದ್ ಸದಸ್ಯತ್ವವನ್ನು ರದ್ದು ಮಾಡಲಾಗಿದೆ.

ಬೆಳ್ಳಾರೆ ಗ್ರಾ.ಪಂ.ನ 1ನೇ ವಾರ್ಡ್ ಚುನಾಯಿತ ಸದಸ್ಯ ಕೆ. ಮಹಮ್ಮದ್ 2024-25ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಯ ಘೋಷಣೆಯನ್ನು ನಿಗದಿತ ಅವಧಿಯೊಳಗೆ ದಾಖಲಿಸದೇ ಇರುವ ಕಾರಣ, ರಾಜ್ಯ ಚುನಾವಣ ಆಯೋಗದ ಆದೇಶದಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಬಿ)(4)ರಡಿ ಆತನನ್ನು ಗ್ರಾ.ಪಂ. ಸದಸ್ಯತ್ವದಿಂದ ತೆಗೆದುಹಾಕಲಾಗಿದೆ.

ಹಾಗೂ ಆ ಸ್ಥಾನವು ಖಾಲಿಯಾಗಿದೆ ಎಂದು ಘೋಷಿಸಲಾಗಿದೆ. ಈ ಬಗ್ಗೆ ಚುನಾವಣ ಆಯೋಗವು ಬೆಳ್ಳಾರೆ ಗ್ರಾಮ ಪಂಚಾಯತಿಗೆ ಪತ್ರದ ಮೂಲಕ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!