ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮ ಬಿಸಿರೋಡಿನ ಆಡಳಿತ ಸೌಧದ ಸಭಾಂಗಣದಲ್ಲಿ ನಡೆದಿದೆ. ಬಂಟ್ವಾಳ ಬೂಡ ಅಧ್ಯಕ್ಷ ಬೇಬಿ ಕುಂದರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿಶ್ವಕರ್ಮರ ತತ್ವ ಸಿದ್ದಾಂತ, ಯೋಚನೆ, ಯೋಜನೆ ಇಡೀ ಸಮಾಜಕ್ಕೆ ಸಿಗಬೇಕು.

ಹಾಗಾಗಿ ಮುಂದಿನ ದಿನಗಳಲ್ಲಿ ನಾಲ್ಕು ಗೋಡೆಗಳ ನಡುವೆ ಕಾರ್ಯಕ್ರಮವಾಗದೆ ದೊಡ್ಡ ಮಟ್ಟದಲ್ಲಿ ಸಾರ್ವಜನಿಕ ಆಚರಣೆಯಾಗುವಂತೆ ಅಧಿಕಾರಿಗಳ ಜೊತೆ ಸಂಘದ ಪ್ರಮುಖರು ಜೊತೆಯಾಗಿ ಎಂದು ಅವರು ತಿಳಿಸಿದ್ದಾರೆ. ಇನ್ನೂ ಈ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಉಪತಹಶೀಲ್ದಾರ್ ದಿವಾಕರ ಮುಗುಳಿಯ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.



