ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಯುವತಿಯೊಬ್ಬಳಿಗೆ ಕಿರುಕುಳ; ಆರೋಪಿಗೆ 4 ತಿಂಗಳು ಜೈಲು ಶಿಕ್ಷೆ..!

ಕೆಎಸ್ ಆರ್ ಟಿಸಿ ಬಸ್ ನಲ್ಲಿ ಯುವತಿಗೆ ಕಿರುಕುಳ ನೀಡಿದ್ದ ಆರೋಪಿ ಮೊಹಮ್ಮದ್ ಸತ್ತಾರ್‌ಗೆ 4 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಯೊಬ್ಬಳಿಗೆ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ಆರೋಪಿ ಮಾಡ್ನೂರು ಗ್ರಾಮದ ಮೊಹಮ್ಮದ್ ಸತ್ತಾರ್ ಎಂಬಾತನಿಗೆ 4 ತಿಂಗಳು ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ.

ಸುಳ್ಯದಿಂದ ಪುತ್ತೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬರು, ‘ಪಕ್ಕದಲ್ಲಿ ಕುಳಿತಿದ್ದ ಮೊಹಮ್ಮದ್ ಸತ್ತಾರ್ ಕಿರುಕುಳ ನೀಡಿದ್ದ’ ಎಂದು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು. ಆಗಿನ ಠಾಣಾಧಿಕಾರಿ ರಾಜೇಶ್ ಕೆ.ವಿ ಅವರು ಪ್ರಕರಣದ ತನಿಖೆ ನಡೆಸಿ, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣಪುರ್ ಅವರು ಮೊಹಮ್ಮದ್ ಸತ್ತಾರ್‌ಗೆ 4 ತಿಂಗಳ ಜೈಲು ಶಿಕ್ಷೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!