ಕಡಲ ತಡಿಯ ಭಾರ್ಗವ ಡಾ.ಶಿವರಾಮ ಕಾರಂತ ಅವರ 124ನೇ ವರ್ಷದ ಜನ್ಮದಿನಾಚರಣೆ ಹಾಗೂ ಕಾರಂತ ಬಾಲವನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅ.10ರಂದು ಪುತ್ತೂರಿನ ಬಾಲವನ ಬಯಲು ರಂಗಮ0ದಿರದಲ್ಲಿ ನಡೆಯಲಿದೆ.
2024ನೇ ಸಾಲಿನ ಕಾರಂತ ಬಾಲವನ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಜನಪದ ವಿದ್ವಾಂಸ ಡಾ.ಬಿ.ಎ.ವಿವೇಕ ರೈ ಹಾಗೂ 2025ನೇ ಸಾಲಿನ ಪ್ರಶಸ್ತಿಯನ್ನು ಶಿಕ್ಷಣ ಸಾಹಿತಿ ಮಕ್ಕಳ ಮಂಟಪದ ರೂವಾರಿ ಡಾ.ಎನ್.ಸುಕುಮಾರ ಗೌಡ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಾಯಕ ಆಯುಕ್ತರ ಕಚೇರಿ ಹಾಗೂ ಡಾ.ಕೋಟ ಶಿವರಾಮ ಕಾರಂತ ಬಾಲವನ ಸಮಿತಿ ಆಶ್ರಯದಲ್ಲಿ ದಿನವಿಡೀ ಕಾರ್ಯಕ್ರಮ ನಡೆಯಲಿದ್ದು. ಈ ಕಾರ್ಯಕ್ರಮವು ಶಾಸಕ ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ಎಸ್ ತಂಗಡಗಿ ಪ್ರಶಸ್ತಿ ಪ್ರದಾನ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಕಸಪಾ ಪುತ್ತೂರು ಘಟಕಾಧ್ಯಕ್ಷ ಉಮೇಶ್ ನಾಯಕ್ ಪುತ್ತೂರು, ಕಾರ್ಯಕ್ರಮ ಸಂಯೋಜಕರಾದ ಜಗನ್ನಾಥ ಅರಿಯಡ್ಕ ಮತ್ತು ರಮೇಶ್ ಉಳಯ ಉಪಸ್ಥಿತರಿದ್ದರು.ಕಸಪಾ ಪುತ್ತೂರು ಘಟಕಾಧ್ಯಕ್ಷ ಉಮೇಶ್ ನಾಯಕ್ ಪುತ್ತೂರು, ಕಾರ್ಯಕ್ರಮ ಸಂಯೋಜಕರಾದ ಜಗನ್ನಾಥ ಅರಿಯಡ್ಕ ಮತ್ತು ರಮೇಶ್ ಉಳಯ ಉಪಸ್ಥಿತರಿದ್ದರು.



