ಸೀತಂಗೋಳಿಯಲ್ಲಿ ಮೀನು ವ್ಯಾಪಾರಿಯನ್ನು ಚೂರಿಯಿಂದ ಇರಿದ ಘಟನೆಗೆ ಸಂಬಂಧಿಸಿ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ.

ಚೂರಿಯಿಂದ ಇರಿದ ದುಷ್ಕರ್ಮಿ ಚೂರಿಯನ್ನು ಕುತ್ತಿಗೆಯಲ್ಲೇ ಬಿಟ್ಟು ಹೋಗಿದ್ದಾನೆ. ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಕುಂಬಳೆಯ ಸೀತಂಗೋಳಿಯಲ್ಲಿ ರಸ್ತೆ ಮಧ್ಯೆ ಈ ಘಟನೆ ನಡೆದಿತ್ತು. ಇರಿತದಿಂದ ಗಂಭೀರ ಗಾಯಗೊಂಡ ಯುವಕನನ್ನ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಕುಂಬಳೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ ಎರಡು ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.



