ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು.

ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ ಪ್ರೋತ್ಸಾಹ ಅಗತ್ಯ. ಕಲಾವಿದರಿಗೆ ತೊಂದರೆಯಾದಾಗ ಒಗ್ಗಟ್ಟಿನ ಧ್ವನಿಯಾಗಲು ಹಿಂದೆ ಮುಂದೆ ನೋಡುವುದು ಬೇಡ. ಒಕ್ಕೂಟ ಇನ್ನಷ್ಟು ವೃದ್ಧಿಸಬೇಕು. ಕಲಾಪೋಷಕರಿಂದ ಇದು ಸಾಧ್ಯವಾಗಲು ಸಾಧ್ಯ ಎಂದು ಮಂಗಳೂರು ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ಕಿಶೋರ್ ಡಿ. ಶೆಟ್ಟಿ ಹೇಳಿದ್ದಾರೆ. ಅವರು ಕದ್ರಿ ಲಯನ್ಸ್ ಅಶೋಕ ಭವನದಲ್ಲಿ ನಡೆದ ತುಳು ನಾಟಕ ಕಲಾವಿದರ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ 2026-27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಅವರು ಪುನರಾಯ್ಕೆಗೊಂಡರು. ಅಶಕ್ತ ಸದಸ್ಯರಿಗೆ ಸಹಾಯ ಧನವನ್ನು ಹಸ್ತಾಂತರಿಸಲಾಯಿತು. ಹೆಚ್ಚುವರಿಯಾಗಿ ಕಾರ್ಯಕಾರಿ ಮಂಡಳಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಇನ್ನು ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ತಾರಾನಾಥ ಶೆಟ್ಟಿ ಬೋಳಾರ, ಗೋಕುಲ್ ಕದ್ರಿ, ಕಲಾವಿದರ ನಿಧಿಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!