ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯೊಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

ಬ್ರಹ್ಮಾವರದ ಕೌಶಲ್ಯ ಬಂಧಿತ ಮಹಿಳೆ. ಈಕೆ 2023ರ ನವೆಂಬರ್ ನಲ್ಲಿ ಬಾರಕೂರು ಹೇರಾಡಿಯ ಸರಿತಾ ಲೂವಿಸ್ ಎಂಬವರಿಗೆ ಪಿಎಂಇಜಿಪಿ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ಹೇಳಿದ್ದು ನಂತರದ ದಿನಗಳಲ್ಲಿ ಸಬ್ಸಡಿ ಲೋನ್ ಬಗ್ಗೆ ಹಲವಾರು ಕಾರಣಗಳನ್ನು ತಿಳಿಸಿ ಹಣ ಪಾವತಿಸುವಂತೆ ತಿಳಿಸಿದ್ದಳು. ಅದರಂತೆ ಸರಿತಾ ಲೂವಿಸ್ ಹಂತ ಹಂತವಾಗಿ ಕೌಶಲ್ಯಳ ಖಾತೆಗೆ ಹಾಗೂ ಆಕೆಯ ತಿಳಿಸಿದ ವ್ಯಕ್ತಿಗಳಾದ ಆಕೆಯ ಗಂಡ ಸಂದೇಶ ಮತ್ತು ಪ್ರಕಾಶ, ಆಶೀಶ ಶೆಟ್ಟಿ, ರಾಜೇಂದ್ರ ಬೈಂದೂರು, ಗೀತ, ಹರಿಣಿ, ನವ್ಯ, ಕುಮಾರ್, ಮಾಲತಿ, ಪ್ರವೀಣ್, ಹರಿಪ್ರಸಾದ್, ನಾಗರಾಜ ಮತ್ತು ಭಾರತಿ ಸಿಂಗ್ ಎಂಬವರಿಗೆ ಒಟ್ಟು 80,72,000ರೂ. ಹಣ ನೀಡಿದ್ದರು ಎಂದು ದೂರಲಾಗಿದೆ. ಅದೇ ರೀತಿ ಕೌಶಲ್ಯ, ಅಂಜಲಿನ್ ಡಿಸಿಲ್ವಾ ಎಂಬವರಿಗೂ ಪಿಎಂಇಜಿಪಿ ಅಡಿಯಲ್ಲಿ ಸಬ್ಸಡಿ ಲೋನ್ ಮಾಡಿಸಿಕೊಡುವುದಾಗಿ ಹೇಳಿ ಹಂತ ಹಂತವಾಗಿ ಸರಿತಾ ಲೂವಿಸ್‌ಗೆ ತಿಳಿಸಿದ ವ್ಯಕ್ತಿಗಳ ಖಾತೆಗಳಿಗೆ 65,00,000ರೂ. ನಗದು ಹಣವನ್ನು ಪಾವತಿಸಿದ್ದರು. ಕೌಶಲ್ಯ ಇವರಿಬ್ಬರಿಗೆ ಒಟ್ಟು 4 ಕೋಟಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಹಾಗೂ ಬ್ಯಾಂಕ್ ನೌಕರ ಎಂದು ಪೋನ್ನಲ್ಲಿ ಮಾತನಾಡಿ ನಂಬಿಸಿ ಒಟ್ಟು 1,45,72,000ರೂ. ಹಣ ಪಡೆದು ಮೋಸ ಮಾಡಿರುವುದಾಗಿ ದೂರಲಾಗಿದೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿ ಕೌಶಲ್ಯಳನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!