ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ.

ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ ಮನೆ ಆವರಣದಲ್ಲಿರುವ 15 ಅಡಿ ಬಾವಿಗೆ ಬಿದ್ದಿದ್ದು, ಮಗುವನ್ನು ಸ್ಥಳೀಯ ಯುವಕ ಜೀವದ ಹಂಗು ತೊರೆದು ರಕ್ಷಿಸಿ ಮಾನವೀಯತೆ ಮೆರೆದಿರುವ ಘಟನೆ ದೇರಳಕಟ್ಟೆ ಬೆಳ್ಮ ಗ್ರಾಮದ ಮಾರಿಯಮ್ಮಗೋಳಿ ದೈವಸ್ಥಾನದ ಸಮೀಪ ನಡೆದಿದೆ. ಗುರುಪ್ರಸಾದ್ ಎಂಬವರ ಮಗಳಾದ ಎರಡೂವರೆ ಹರೆಯದ ಹಿಮಾನಿ ರಕ್ಷಿಸಲ್ಪಟ್ಟ ಹೆಣ್ಣು ಮಗು. ಮನೆಮಂದಿ ಅಂಗಳದಲ್ಲಿ ಕುಳಿತಿದ್ದ ಸಂದರ್ಭ ಅಂಗಳದಲ್ಲಿ ಆಟವಾಡುತ್ತಾ ಮಗು ಮನೆ ಆವರಣದಲ್ಲಿನ ತೆರೆದ ಬಾವಿಯೊಳಗೆ ಬಿದ್ದಿದೆ.

15 ಅಡಿ ಆಳದ ನೀರಿದ್ದ ಬಾವಿಯೊಳಗೆ ಬಿದ್ದ ಮಗುವನ್ನು ತಕ್ಷಣ ಚಿಕ್ಕಪ್ಪ ಜೀವನ್ ಎಂಬವರು ಹಗ್ಗ ಹಾಕಿ ರಕ್ಷಿಸಲು ಬಾವಿಗೆ ಇಳಿದಿದ್ದಾರೆ. ಆದರೆ ಈಜು ಬಾರದೇ ಇರುವುದರಿಂದ ಹಗ್ಗದ ಸಹಾಯದಲ್ಲಿ ನಿಂತು ಮಗುವಿನ ಕೈಯನ್ನು ಹಿಡಿದುಕೊಂಡು ಮೇಲೆ ಬರಲು ಸಾಧ್ಯವಾಗದೇ ಅಲ್ಲೇ ಉಳಿದಿದ್ರು. ಅದಾಗಲೇ ಒಂದು ಬಾರಿ ನೀರಿನೊಳಗೆ ಹೋಗಿ ಮಗು ಮೇಲೆ ಬಂದಿತ್ತು. ಟೀಂ ಪೆಲತ್ತಡಿ ಫ್ರೆಂಡ್ಸ್ನ ಯುವಕರು ಆಟವಾಡಲು ಗದ್ದೆಗೆ ಹೋಗುವ ಸಂದರ್ಭ ಮಗು ಬಾವಿಗೆ ಬಿದ್ದಿರುವುದನ್ನು ಗಮನಿಸಿದ್ದಾರೆ. ಮನೆಮಂದಿಯ ರೋದನ ಕಂಡು ತಕ್ಷಣ ಸ್ಥಳಕ್ಕೆ ಧಾವಿಸಿದ ಯುವಕರ ಪೈಕಿ ವಿವೇಕ್ ಅವರು ಅದೇ ಹಗ್ಗದ ಮೂಲಕ ಕೆಳಗಿಳಿದು ಬಾವಿಯ ನೀರಿಗೆ ಧುಮುಕಿದ್ದಾರೆ. ಇವರಿಗೆ ಸ್ನೇಹಿತ ಧನಂಜಯ್ ಸೇರಿದಂತೆ ಸ್ಥಳೀಯ ಯುವಕರು ಹಗ್ಗವನ್ನು ಹಿಡಿಯುವುದರ ಜೊತೆಗೆ ಧೈರ್ಯ ತುಂಬಿದ್ದಾರೆ. ಬಳಿಕ ಮಗುವನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ವಿವೇಕ್ ಗಾರ್ಡನಿಂಗ್ ಸಂಸ್ಥೆಯಲ್ಲಿ ಸುಪರ್ ವೈಸರ್ ಆಗಿ ದುಡಿಯುತ್ತಿದ್ದಾರೆ.

Leave a Reply

Your email address will not be published. Required fields are marked *

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

error: Content is protected !!