ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರೊಂದಿಗೆ, ಕೇಂದ್ರ ಸರ್ಕಾರದ ಯೋಜನೆಗಳಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ, 15 ನೇ ಹಣಕಾಸು ಅನುದಾನ, ಸ್ವಚ್ಛ ಭಾರತ ಮಿಷನ್, ಜಲಜೀವನ್ ಮಿಷನ್,ಮತ್ತು ರಾಜ್ಯ ಸರಕಾರದ ಯೋಜನೆಯಾದ ಬಸವ ವಸತಿ ಮತ್ತು ಡಾ. ಬಿ ಆರ್ ಅಂಬೇಡ್ಕರ್ ನಿವಾಸ್ ಯೋಜನೆಯ ಪ್ರಗತಿಯ ಬಗ್ಗೆ ಚರ್ಚಿಸಿ ಪರಿಶೀಲಿಸಲಾಗಿದೆ. ಕೇಪು ಗ್ರಾಮ ಪಂಚಾಯತಿಯು ಕೇಂದ್ರ ಸರ್ಕಾರದ ಮ್ಯಾಗ್ರಿಗ, ಮತ್ತು ಜಲ ಜೀವನ್ ಮಿಷನ್ ಅನುಷ್ಠಾನದಲ್ಲಿ ಸಾಧಿಸಿರುವ ಉತ್ತಮ ಪ್ರಗತಿ ಮತ್ತು ಸಾರ್ವಜನಿಕರ ಸೇವೆಯಲ್ಲಿ ಪಾರದರ್ಶಕತೆ ಮತ್ತು ಗ್ರಾಮ ಪಂಚಾಯತಿಯ ಸಿಬ್ಬಂದಿಯವರ ಉತ್ತಮ ಕಾರ್ಯವೈಖರಿ ಬಗ್ಗೆ ತಿಳಿದು ಪ್ರಶಂಶಿಸಲಾಗಿದೆ. ಇನ್ನೂ ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಪದ್ಮಶ್ರೀ ಪುರಸ್ಕೃತರಾದ ಶ್ರೀ ಮಹಾಬಲ ನಾಯ್ಕರವರು ಉಪಸ್ಥಿತರಿದ್ದರು.



