ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ, ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ.

ಹುಣಸೂರು ತಾಲೂಕಿನ ಎಮ್ಮೆ ಕೊಪ್ಪಲು ಗ್ರಾಮದ ನೀಲಮ್ಮ, ಮಗ ಹರೀಶ್ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ತಾಯಿಗೆ ವಿದ್ಯುತ್ ತಂತಿ ತಗುಲಿದೆ. ತಾಯಿಯ ರಕ್ಷಣೆ ಮಾಡಲು ಹೋದ ಮಗ ಹರೀಶ್ ಸಹ ಕರೆಂಟ್ ಶಾಕ್‌ಗೆ ಬಲಿಯಾಗಿದ್ದಾರೆ. ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹುಣಸೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸ್ ಹಾಗೂ ಚೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದಾರೆ.



