ಮಂಗಳೂರಿನ ಬಳ್ಳಾಲ್ ಬಾಗ್‌ನಲ್ಲಿರುವ ಶ್ರೀ ದೇವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಶುಲ್ಕ ಪಾವತಿ ತಡವಾದರೆ ದಂಡ ಬಡ್ಡಿಯಾಗಿ ದೊಡ್ಡ ಮೊತ್ತವನ್ನು ವಸೂಲಿ ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ದಂಡವನ್ನು ಹೆಚ್ಚಿನ ಪ್ರಮಾಣದಲ್ಲಿ ವಿಧಿಸಲಾಗುತ್ತಿದ್ದು, ಇದು ವಿದ್ಯಾರ್ಥಿಗಳಿಗೆ ಭಾರೀ ತೊಂದರೆಯಾಗುತ್ತಿದೆ ಎಂದೂ ವಿದ್ಯಾರ್ಥಿಗಳು ದೂರಿದ್ದಾರೆ.



