ಜನ ಮನದ ನಾಡಿ ಮಿಡಿತ

Advertisement

ಉಡುಪಿ: ದನ ಮಾಂಸ ಸಾಗಾಟಕ್ಕೆ ಯತ್ನ; ಸ್ಥಳಕ್ಕೆ ಪೊಲೀಸ್ ದಾಳಿ…!

ಉಡುಪಿ ಕಾರ್ಕಳ ತಾಲೂಕು ನಲ್ಲೂರು ಗ್ರಾಮದ ಕರ್ಮರಕಟ್ಟೆ ಪಡೀಲುಬೆಟ್ಟುವಿನಲ್ಲಿ ದನ ಕಡಿದು ಅಕ್ರಮವಾಗಿ ಮಾಂಸ ಸಾಗಾಟಕ್ಕೆ ಯತ್ನಿಸುತ್ತಿದ್ದ ಸಂದರ್ಭ ಪೊಲೀಸ್ ದಾಳಿ ನಡೆದಿದೆ.

ಈ ವೇಳೆ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿಯಂತೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಪಡೀಲುಬೆಟ್ಟುವಿಗೆ ತೆರಳಿ, ಅಶ್ರಫ್ ಎಂಬಾತನಿಗೆ ಸೇರಿದ ತೋಟದಲ್ಲಿ ದನ ಕಡಿದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಗ್ರಾಮಾಂತರ ಠಾಣೆ ಎಸ್‌ಐ ಪ್ರಸನ್ನ ಎಂ.ಎಸ್. ಹಾಗೂ ಅವರ ತಂಡ ಸ್ಥಳಕ್ಕೆ ಧಾವಿಸಿದ್ದು ಈ ವೇಳೆ ಮಾಂಸ ತುಂಬಿದ್ದ ಸ್ವಿಫ್ಟ್ ಡಿಸೈರ್ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಆರೋಪಿಗಳಾದ ಅಶ್ರಫ್, ನವಾಜ್, ಅಪ್ತಾಬ್ ಪರಾರಿಯಾಗಿದ್ದಾರೆ. ಬಳಿಕ ಮನೆ ಪರಿಶೀಲನೆ ಮಾಡುವ ಸಂದರ್ಭ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 60 ಕೆ.ಜಿ.ಯಷ್ಟು ದನದ ಮಾಂಸ ಪತ್ತೆಯಾಗಿದ್ದು. ವಧೆಗೆಂದು ತಂದಿದ್ದ ಮತ್ತೊಂದು ದನ ತೋಟದಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!