ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಮುಖ್ಯಮಂತ್ರಿ ಚಾಲನೆ….!

ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್‌ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ ಆಕರ್ಷಕ ಮತ್ತು ಸುಸಜ್ಜಿತ ಕಲಾಲೋಕ ಮಳಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರಕಲಾ ರಚನೆ ಮತ್ತು ಘಂಟಾನಾದದ ಮೂಲಕ ಉದ್ಘಾಟಿಸಿದ್ದಾರೆ.

ಉದ್ಘಾಡಿಸಿ ಮಾತನಾಡಿದ ಮುಖ್ಯಮಂತ್ರಿಗಳು, `ಕರ್ನಾಟಕದ ಕೈಗಾರಿಕಾ ಭೂಪಟದಲ್ಲಿ ಇದೊಂದು ಸಂತಸದ ಕ್ಷಣವಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನವು ಜನನಿಬಿಡತೆಯಲ್ಲಿ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಪ್ರತೀದಿನವೂ ಇಲ್ಲಿ ಹತ್ತಾರು ಸಾವಿರ ಪ್ರಯಾಣಿಕರು ಬರುತ್ತಿರುತ್ತಾರೆ. ಇಂಥವರಿಗೆ ಇಲ್ಲಿಗೆ ಬಂದ ತಕ್ಷಣವೇ ಕರ್ನಾಟಕದ ಅಭಿಮಾನದ ಪಯಣ ಅರ್ಥವಾಗಬೇಕು ಎನ್ನುವ ಉದ್ದೇಶದಿಂದ ಕಲಾಲೋಕ ಮಳಿಗೆ ನಿರ್ಮಿಸಲಾಗಿದೆ.

ಇದರ ಮೂಲಕ ಕರ್ನಾಟಕದ ಹೆಮ್ಮಯ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಪ್ರಚಾರ, ಬ್ರ‍್ಯಾಂಡಿಂಗ್ ಮತ್ತು ಮಾರಾಟ ಸಾಧಿಸಲಾಗುವುದು ಎಂದಿದ್ದಾರೆ. ಸಚಿವ ಎಂ ಬಿ ಪಾಟೀಲ್ ಮಾತನಾಡಿ, `ಟರ್ಮಿನಲ್-2ರ ಸಮೀಪ ನಿರ್ಮಿತವಾಗಿರುವ ಕಲಾಲೋಕ ಮಳಿಗೆಯಲ್ಲಿ ರಾಜ್ಯದ ಪಾರಂಪರಿಕ ಉತ್ಪನ್ನಗಳಾದ ಮೈಸೂರು ಸ್ಯಾಂಡಲ್ ಸೋಪ್, ಗಂಧದ ಎಣ್ಣೆ, ಅಗರಬತ್ತಿ, ಮೈಸೂರು ಸಿಲ್ಕ್, ಚನ್ನಪಟ್ಟಣದ ಬೊಂಬೆ, ಲಿಡ್ಕರ್ ಉತ್ಪನ್ನಗಳು, ಬಗೆಬಗೆಯ ಪರಿಮಳವಿರುವ ಕಾಫಿಪುಡಿ ಮತ್ತು ಪಾನೀಯ, ಕೈಮಗ್ಗದ ಉತ್ಪನ್ನಗಳು, ಇಳಕಲ್ ಸೀರೆ, ಲಂಬಾಣಿ ಉಡುಪು, ಗಂಧದ ಕಲಾಕೃತಿ, ಬಿದರಿ ಕಲಾಕೃತಿ, ಮೈಸೂರು ಶೈಲಿಯ ಕಲಾಕೃತಿಗಳು, ಮುಂತಾದವು ಸಿಗಲಿವೆ.

ಒಟ್ಟಾರೆಯಾಗಿ ಜಿ.ಐ. ಮಾನ್ಯತೆ ಹೊಂದಿರುವ ರಾಜ್ಯದ 45 ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಎರಡೂ ಈ ಮಳಿಗೆಯಲ್ಲಿ ನಡೆಯಲಿದೆ ಎಂದಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಎಸ್ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!