ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಟ್ಯಾಂಕರ್ ಲಾರಿಗಳ ನಡುವೆ ಸಿಲುಕಿಕೊಂಡ ರಿಕ್ಷಾ; ಮೂವರ ಸಾವು..!

ಪಣಂಬೂರು ಬಳಿ ಎರಡು ಟ್ಯಾಂಕರ್ ಲಾರಿಗಳ ನಡುವೆ ರಿಕ್ಷಾ ಸಿಲುಕಿ ಮೂವರು ಮೃತಪಟ್ಟ ದಾರುಣ ಘಟನೆ ನಡೆದಿದೆ.

ಪಣಂಬೂರು ಸಿಗ್ನಲ್‌ನಲ್ಲಿ ಬಳಿ ನಿಂತಿದ್ದ ವಾಹನಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನಪ್ಪಿದ್ದಾರೆ. ಪಣಂಬೂರು ಸಿಗ್ನಲ್ ಬಳಿ ವಾಹನಗಳು ಸಿಗ್ನಲ್‌ಗಾಗಿ ಕಾಯುತ್ತಿದ್ದ ವೇಳೆ ವೇಗವಾಗಿ ಬಂದ ಟ್ಯಾಂಕರ್ ಹಿಂದಿನಿಂದ ಆಟೊ ರಿಕ್ಷಾ ಮತ್ತು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕರ್ ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೊ ರಿಕ್ಷಾ ನಿಂತಿತ್ತು.

ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕರ್ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಅದರ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಆಟೊ ರಿಕ್ಷಾ ಎರಡು ಟ್ಯಾಂಕರ್ ಗಳ ಮಧ್ಯೆ ಸಿಲುಕಿ ಅಪ್ಪಚ್ಚಿಯಾಗಿದೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಮತ್ತು ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!