ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಅಕ್ರಮ ಗೋಹತ್ಯೆ ಪ್ರಕರಣ; ಸುಮಾರು 150 ಕೆಜಿ ದನದ ಮಾಂಸ ವಶ…!

ಬಂಟ್ವಾಳ ತಾಲೂಕು ಅರಳ ಗ್ರಾಮದ ನಿವಾಸಿ ಮೈಯದಿ ಎಂಬವರು, ಅವರ ಮನೆಯ ಆವರಣದಲ್ಲಿರುವ ಶೆಡ್ ಬಳಿ ಜಾನುವಾರುಗಳನ್ನು ಕಟ್ಟಿಕೊಂಡು, ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ ಮತ್ತು ಸಿಬ್ಬಂದಿಯವರು ಸ್ಥಳಕ್ಕೆ ದಾಳಿ ಮಾಡಿದ್ದಾರೆ.

ಮನೆಯ ಬಳಿಯ ಶೆಡ್‌ನಲ್ಲಿ ಮೂರು ಜನರು, ದನವನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದು, ದಾಳಿ ಸಮಯ ಇಬ್ಬರು ಪರಾರಿಯಾಗಿರುತ್ತಾರೆ. ಒರ್ವನನ್ನು ವಶಕ್ಕೆ ಪಡೆದು ವಿಚಾರಿಸಲಾಗಿ ಮೈಯದಿ ಎಂಬಾತನಾಗಿದ್ದು, ಶೆಡ್‌ನಲ್ಲಿದ್ದ ಮೂರು ಹಸುಗಳನ್ನು ಮತ್ತು ಒಂದು ಕರುವನ್ನು ರಕ್ಷಿಸಲಾಗಿದೆ. ವಧೆ ಮಾಡಿದ ಸುಮಾರು 150 ಕೆಜಿ ದನದ ಮಾಂಸವನ್ನು ವಶ ಪಡಿಸಿಕೊಂಡಿದ್ದಾರೆ. ದಸ್ತಗಿರಿಯಾದ ಆರೋಪಿ ಮೈಯದಿ ಎಂಬಾತನನ್ನು ಮಾನ್ಯ ನ್ಯಾಯಾಲಯ ಹಾಜರುಪಡಿಸಲಾಗಿದ್ದು, ತಲೆಮರೆಸಿಕೊಂಡ ಆರೋಪಿಗಳ ಪತ್ತೆಕಾರ್ಯ ಪ್ರಗತಿಯಲ್ಲಿದೆ.

ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೇ ಮನೆಯ ಆವರಣದ ಶೆಡ್ ನಲ್ಲಿ ಕಸಾಯಿಖಾನೆಯನ್ನು ನಿರ್ಮಾಣ ಮಾಡಿಕೊಂಡು ಮನೆಯಿಂದಲೇ ವಿದ್ಯುತ್ ಸಂಪರ್ಕ ಪಡೆದು ಜಾನುವಾರುಗಳ ವಧೆ ನಡೆಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ಈತನ ಮನೆ ಹಾಗೂ ಶೇಡ್‌ನ ಆವರಣವನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಜಪ್ತಿ ಮಾಡಿ, ಮಾನ್ಯ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿ ಮಂಗಳೂರು ಉಪವಿಭಾಗರವರಿಗೆ ಮುಟ್ಟುಗೋಲು ಮಾಡುವ ಬಗ್ಗೆ ವರದಿಯನ್ನು ಸಲ್ಲಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!