ಹನುಮಾನ್ ನಗರ, ಕಡಬದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕಡಬ ಕ್ಲಸ್ಟರ್ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ವಿಭಾಗಗಳಲ್ಲಿ ಬಹುಮಾನಗಳನ್ನು ಗಳಿಸಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಸಂತ ಜೋಕಿಮರ ಹಿರಿಯ ಪ್ರಾಥಮಿಕ ಶಾಲೆ, ಕಡಬದಲ್ಲಿ ಸ್ಪರ್ಧೆಗಳು ನಡೆದಿವೆ. ಸ್ಪರ್ಧೆಯ ಒಟ್ಟು ಫಲಿತಾಂಶದಲ್ಲಿ ಹಿರಿಯ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿ ಹಾಗೂ ಕಿರಿಯ ವಿಭಾಗದಲ್ಲಿ ತೃತೀಯ ಸಮಗ್ರ ಪ್ರಶಸ್ತಿ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಗೆ ಲಭಿಸಿದೆ. ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.



