ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿ ಕಡೆಯಿಂದ ಬಂದ ಗೂಡ್ಸ್ ಟೆಂಪೊ ಡಿ*ಕ್ಕಿ ; ವಿದ್ಯಾರ್ಥಿನಿ ಮೃ*ತ್ಯು…..!

ಟೆಂಪೊ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ.

ಪಡುಬಿದ್ರಿ ನಡ್ನಾಲು ಬಿಲ್ಲಿತೋಟ ನಿವಾಸಿ ಪ್ರೇಕ್ಷಾ ಮೃತಪಟ್ಟವರು. ಮಂಗಳೂರು ಕಡೆ ಹೋಗುವ ಸಂದರ್ಭ ಸರ್ವಿಸ್ ರಸ್ತೆ ದಾಟುವಾಗ ಉಡುಪಿ ಕಡೆಯಿಂದ ಬಂದ ಗೂಡ್ಸ್ ಟೆಂಪೊ ಡಿಕ್ಕಿಯಾಗಿ ರಸ್ತೆಗೆ ಬಿದ್ದು ಅವರ ತಲೆಗೆ ಗಂಭೀರ ಗಾಯವಾಗಿತ್ತು. ಸಾರ್ವಜನಿಕರು ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಿದ್ದಾರೆ. ವಾಮಂಜೂರು ಕರಾವಳಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಪ್ರೇಕ್ಷಾ ಪರೀಕ್ಷೆ ಮುಗಿಸಿ ಮನೆಯತ್ತ ಹೊರಟಿದ್ರು. ತೀರಾ ಬಡ ಕುಟುಂಬದ ಆಕೆ ತಂದೆಯನ್ನು ಕಳೆದುಕೊಂಡಿದ್ದಾರೆ. ಇದೀಗ ಅವರು ತಾಯಿ, ಸಹೋದರನನ್ನು ಅಗಲಿದ್ದಾರೆ. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಪುತ್ತೂರು: ಮುಳಿಯ ಗೋಲ್ಡ್ ಸಂಸ್ಥೆಯ ಮಾಲಕ ಸರಾಫ್ ಮುಳಿಯ ಶ್ಯಾಮ ಭಟ್ ನಿಧನ…!

ಮಂಗಳೂರು: ಮಗುವಿನ ಚಿಕಿತ್ಸೆಗೆ ರವಿ ಕಟಪಾಡಿಯಿಂದ ₹2.50 ಲಕ್ಷ ನೆರವು…!

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

error: Content is protected !!