ಕಲ್ಲಡ್ಕ ವಿಟ್ಲ ರಸ್ತೆಯ ಕೆಲಿಂಜದಲ್ಲಿ ರಸ್ತೆ ದಾಟುತ್ತಿದ್ದ ಹಸುವಿಗೆ ಓಮ್ನಿ ಕಾರು ಡಿಕ್ಕಿಯಾಗಿ ಪಕ್ಕದಲ್ಲಿ ನಿಂತಿದ್ದ ಕಾರಿಗೆ ಮತ್ತೊಮ್ಮೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಗಬ್ಬದ ಹಸುವಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕೊಂಡೊಯ್ಯಲಾಗಿದೆ. ಓಮ್ನಿಯಲ್ಲಿದ್ದ ಪ್ರಯಾಣಿಕರಲ್ಲಿ ಮಹಿಳೆಯೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಓಮ್ನಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಮತ್ತೊಂದು ಕಾರು ಸಹ ನಜ್ಜುಗುಜ್ಜಾಗಿದೆ.



