ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟಕ್ಕೆ ಯತ್ನ!

ವದೆ ಮಾಡುವ ಉದ್ದೇಶದಿಂದ ಜಾನುವರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನ ಸಹಿತ ಆರೋಪಿಯನ್ನು ವಶಪಡಿಸಿಕೊಂಡು ಆರೋಪಿಯ ಮನೆ ಹಾಗೂ ಕೊಟ್ಟಿಗೆ ಜಪ್ತಿ ಮಾಡಿದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಉಳಿ ಗ್ರಾಮದಲ್ಲಿ ನಡೆದಿದೆ.

ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿಯ ಹಿನ್ನೆಲೆಯಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಗೂಡ್ಸ್ ಅಟೋವನ್ನು ತಡೆದು ಪರಿಶೀಲಿಸಿದಾಗ, ಅದರಲ್ಲಿ ಒಂದು ಜಾನುವಾರನ್ನು ಹಗ್ಗದಿಂದ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಕಂಡು ಬಂದಿರುತ್ತದೆ. ವಾಹನದ ಚಾಲಕನಾದ ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನಿವಾಸಿ ಶ್ರೀಧರ ಪೂಜಾರಿ ಎಂಬಾತನನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಬಂಟ್ವಾಳ ಸರಪ್ಪಾಡಿ ಎಂಬಲ್ಲಿ ಭೋಜ ಮೂಲ್ಯ ಎಂಬವರ ಮನೆಯಿಂದ ಯಾವುದೇ ದಾಖಲಾತಿ ಪರವಾನಿಗೆ ಇಲ್ಲದೇ ಎಲ್ಲಿಯೋ ಗೋಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡವುದರ ಬಗ್ಗೆ ತಿಳಿಸಿದ್ದು, ಮುಂದಿನ ಕಾನೂನುಕ್ರಮಕ್ಕಾಗಿ ಜಾನುವಾರು, ಅಟೋ ಹಾಗು ಒಂದು ಮೊಬೈಲ್ ಫೋನ್‌ನ್ನು ವಶಕ್ಕೆ ಪಡೆದು, ಅರೋಪಿಗಳ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಗೋಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ ಪ್ರಾಣಿ ಹಿಂಸೆ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿತ ಭೋಜ ಮೂಲ್ಯರವರ ಮನೆ ಹಾಗೂ ಅದಕ್ಕೆ ಹೊಂದಿಕೊಂಡಿರುವ ಜಾನುವಾರು ಕೊಟ್ಟಿಗೆ ಸೇರಿದಂತೆ ಆವರಣವನ್ನು ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!