ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

ಸರಕಾರಿ ಪಾಲಿಟೆಕ್ನಿಕ್ ಬಂಟ್ವಾಳದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಸರ್ಕಾರಿ ಪದವಿ ಪೂರ್ವ ಕಾಲೇಜು, ಸಜೀಪಮೂಡದಲ್ಲಿ ಯಶಸ್ವಿಯಾಗಿ ನಡೆದಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಪಾಲಿಟೆಕ್ನಿಕ್ ಬಂಟ್ವಾಳದ ಪ್ರಾಂಶುಪಾಲರಾದ ಶ್ರೀಯುತ ನರಸಿಂಹ ಭಟ್ ಎಚ್ ವಹಿಸಿದ್ದಾರೆ. ಶಿಬಿರದ ಉದ್ಘಾಟನೆಯನ್ನು ಸಜಿಪ ಮೂಡ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶೋಭಾ ಶೆಟ್ಟಿ ನೆರವೇರಿಸಿ, ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳನ್ನು ಸಮಾಜದಲ್ಲಿ ಉತ್ತಮ ಸ್ಥಾನಕ್ಕೆ ತಲುಪಿಸುವ ದಿಶೆಯಲ್ಲಿ ನಿರಂತರವಾಗಿ ಶ್ರಮಿಸುತ್ತಿದೆ ಎಂದಿದ್ದಾರೆ. ಸೇವೆಯ ಮೂಲಕ ಶಿಸ್ತು, ನಾಯಕತ್ವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳುವ ಅವಕಾಶವನ್ನು ಎನ್.ಎಸ್.ಎಸ್ ವಿದ್ಯಾರ್ಥಿಗಳಿಗೆ ನೀಡುತ್ತದೆ ಎಂದು ತಿಳಿಸಿದ್ದಾರೆ.

ಇಂತಹ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸ ಸಾಧ್ಯವಾಗುತ್ತದೆ ಹಾಗೂ ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ರೂಪುಗೊಳ್ಳಲು ನೆರವಾಗುತ್ತದೆ ಎಂದಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತ್ ಸದಸ್ಯರಾದ ಶ್ರೀ ವಿಶ್ವನಾಥ ಬೆಲ್ಚಡ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀ ಜಯ ಪ್ರಕಾಶ್ ಪೆರ್ವ, ಪ್ರಾಂಶುಪಾಲರಾದ ಡಾ. ಜೈರಾಬಿ, ಉಪಾಪ್ರಾಂಶುಪಾಲರಾದ ಶ್ರೀಮತಿ ಜ್ಯೋತಿ ಕುಮಾರಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!