ಜನ ಮನದ ನಾಡಿ ಮಿಡಿತ

Advertisement

ಚಿಕ್ಕಬಳ್ಳಾಪುರ: ಟಿಪ್ಪರ್ ಮತ್ತು ಬೈಕ್ ಡಿಕ್ಕಿ; ಸ್ಥಳದಲ್ಲೇ ನಾಲ್ವರು ಮೃ*ತ್ಯು!

ಟಿಪ್ಪರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದಿದೆ.

ಅಜ್ಜವಾರ ಗ್ರಾಮದ ಅಣ್ಣ ತಮ್ಮಂದಿರಾದ ನರಸಿಂಹಮೂರ್ತಿ ಹಾಗೂ ನಂದೀಶ್ ಸೇರಿದಂತೆ ಅರುಣ್, ಮನೋಜ್ ಮೃತಪಟ್ವ ಯುವಕರಾಗಿದ್ದಾರೆ. ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಯುವಕರು ಚಿಕ್ಕಬಳ್ಳಾಪುರ ನಗರದ ಚರ್ಚ್ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ಹೊರಟಿದ್ದರು. ಮೃತ ನಾಲ್ವರು ಯುವಕರು ನರಸಿಂಹಮೂರ್ತಿಗೆ ಸೇರಿದ ಬೈಕಿನಲ್ಲಿ ಹೊರಟಿದ್ದು, ಇನ್ನೇನು ಅಜ್ಜವಾರ ಗ್ರಾಮಕ್ಕೆ ಹೈವೇಯಿಂದ ಬಲತಿರುವು ಪಡೆದುಕೊಳ್ಳಬೇಕಿತ್ತು. ಅಷ್ಟರಲ್ಲಿ ಟಿಪ್ಪರ್ ಲಾರಿ ಅಡ್ಡ ಬಂದ ಪರಿಣಾಮ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಬೈಕ್ ಅಪ್ಪಚ್ಚಿಯಾಗಿದೆ. ಇನ್ನು ಇಬ್ಬರು ಮಕ್ಕಳನ್ನು ಕಳೆದುಕೊಂಡಿರುವ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಮತ್ತೊಂದೆಡೆ ನರಸಿಂಹಮೂರ್ತಿ ಕಳೆದ ಆರು ತಿಂಗಳ ಹಿಂದೆಯಷ್ಟೇ ಪ್ರೇಮ ವಿವಾಹವಾಗಿದ್ದು, ಮನೆಯಲ್ಲಿ ಸ್ಮಶಾನ ಮೌನ ಆವರಿಸಿದೆ. ಇನ್ನು ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!