ಬಿಸ್ಕೆಟ್ ಕೊಡ್ತ್ತೇನೆ ಎಂದು ಕರೆದು ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.
ಐದು ವರ್ಷದ ಮಗುವಿಗೆ ಬಿಸ್ಕೆಟ್ ಕೊಡುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಮುಫಿಜುಲ್ ಶೇಖ್ (26) ಎಂಬಾತನನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.

ಪಡುಬಿದ್ರಿಯಲ್ಲಿ ನಿರ್ಮಾಣವಾಗುತ್ತಿರುವ ಬಹುಮಹಡಿ ಕಟ್ಟಡದಲ್ಲಿ ಮುಫಿಜುಲ್ ಕೆಲಸ ಮಾಡುತ್ತಿದ್ದ. ಸಂತ್ರಸ್ತ ಬಾಲಕಿಯ ಪೋಷಕರು ಕೂಡ ಇದೇ ಕಟ್ಟಡದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು ಮತ್ತು ಅವರು ಕೂಡ ಮುರ್ಷಿದಾಬಾದ್ ಮೂಲದವರು. ಜುಲೈ 26 ರಂದು ಮಧ್ಯಾಹ್ನ, ಮುಫಿಜುಲ್ ಸಂತ್ರಸ್ತ ಬಾಲಕಿಯ ಪೋಷಕರಿಗೆ ಬಿಸ್ಕೆಟ್ ನೀಡುವ ಸಲುವಾಗಿ ಬಾಲಕಿಯನ್ನು ತನ್ನ ಕೋಣೆಗೆ ಕರೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದ. ಬಾಲಕಿಯನ್ನು ಕೋಣೆಗೆ ಕರೆದುಕೊಂಡು ಹೋಗಿ ದೌರ್ಜನ್ಯವೆಸಗಿದ್ದಾನೆ.
ತನ್ನ ಕೋಣೆಗೆ ಮರಳಿದ ನಂತರ ಹುಡುಗಿ ಹೊಟ್ಟೆ ನೋವಿನ ಬಗ್ಗೆ ದೂರು ನೀಡಲು ಪ್ರಾರಂಭಿಸಿದಳು. ಪೋಷಕರು ಆಕೆಯನ್ನು ಪಡುಬಿದ್ರಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಬಾಲಕಿಯ ದೈಹಿಕ ಪರೀಕ್ಷೆ ಬಳಿಕ ವೈದ್ಯರು ಲೈಂಗಿಕ ದೌರ್ಜನ್ಯದ ಶಂಕೆ ವ್ಯಕ್ತಪಡಿಸಿದ್ದಾರೆ.
ನಂತರ ಪಡುಬಿದ್ರಿ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಪೇದೆಗಳ ಬೆಂಗಾವಲಿನಲ್ಲಿ ಬಾಲಕಿಯನ್ನು ಉಡುಪಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯ ವೈದ್ಯರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದನ್ನು ದೃಢಪಡಿಸಿದ್ದಾರೆ.
ಆರೋಪಿ ಮುಫಿಜುಲ್‌ನನ್ನು ಪೊಲೀಸರು ತಕ್ಷಣ ಬಂಧಿಸಿದ್ದಾರೆ. ಅವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾಪು ಪೊಲೀಸ್ ಸರ್ಕಲ್ ಇನ್‌ಸ್ಪೆಕ್ಟರ್ ಪೂವಯ್ಯ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.



