ಜನ ಮನದ ನಾಡಿ ಮಿಡಿತ

Advertisement

ಹುಣಸೂರು: ಹಾಡಹಗಲೇ 5 ಕೋಟಿ ಚಿನ್ನಾಭರಣ ದರೋಡೆ! ಬೈಕ್‌ನಲ್ಲಿ ಪರಾರಿಯಾದ ಕಳ್ಳರು…!

ಪಟ್ಟಣದ ಹೊರವಲಯದ ಚಿನ್ನಾಭರಣ ಅಂಗಡಿಗೆ ಕನ್ನ ಹಾಕಿ ಕೋಟ್ಯಾಂತರ ರೂಪಾಯಿ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ಹಾಡು ಹಗಲು ಸಂಭವಿಸಿದೆ.

ಹುಣಸೂರಿನ ಬಸ್ ನಿಲ್ದಾಣದ ಹಿಂಭಾಗವಿರುವ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಅಂಗಡಿಯ ಮೇಲೆ ಐದು ಮಂದಿ ಮುಸುಕುದಾರಿಗಳು ಅಂಗಡಿ ಮ್ಯಾನೇಜರ್ ಅಜ್ಗರ್ ಮೇಲೆ ರಿವಾಲ್ವಾರ್‌ನಿಂದ ಗುಂಡು ಹಾರಿಸಿ ದರೋಡೆ ಮಾಡಿದ್ದಾರೆ. ಸುಮಾರು 4-5 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿರುವ ದರೋಡೆಕೋರರು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಯಿಂದ ತಪ್ಪಿಸಿಕೊಂಡ ಅಜ್ಗರ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ದರೋಡೆಕೋರರು ಅಂಗಡಿಯಲ್ಲಿದ್ದ ಚಿನ್ನಾಭರಣಗಳನ್ನು ಬ್ಯಾಗ್‌ಗಳಲ್ಲಿ ತುಂಬಿಕೊಂಡು ಪರಾರಿಯಾಗಿದ್ದಾರೆ.

ಘಟನೆಯ ಸಮಯದಲ್ಲಿ ಅಂಗಡಿಯಲ್ಲಿ ಕೆಲವು ಗ್ರಾಹಕರು ಮತ್ತು ಸಿಬ್ಬಂದಿ ಇದ್ರು, ದರೋಡೆಕೋರರು ಎಲ್ಲರನ್ನೂ ಬೆದರಿಕೆ ಹಾಕಿ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ನಂತರ ಒಬ್ಬ ದರೋಡೆಕೋರ ಮಾತ್ರ ಹೆಲ್ಮೆಟ್ ಬಿಟ್ಟು ಪರಾರಿಯಾಗಿದ್ದಾನೆ. ಇತರರು ಮುಸುಕು ಧರಿಸಿದ್ದು, ಈ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ದರೋಡೆಕೋರರ ಬಂಧನದ ಕಾರ್ಯಾಚರಣೆಗೆ ಇಳಿದಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!