ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಬಿಹಾರದಿಂದ ಮಂಗಳೂರಿಗೆ ಗಾಂಜಾ ತಂದು ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ….!

ಬಿಹಾರದಿಂದ ಮಂಗಳೂರಿಗೆ ಗಾಂಜಾ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಇವರು ಬಿಹಾರದಿಂದ ಮಂಗಳೂರಿಗೆ ರೈಲಿನ ಮೂಲಕ ಗಾಂಜಾ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದು ಖಚಿತ ಮಾಹಿತಿ ಮೇರೆಗೆ ಬಜ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಿಹಾರ ರಾಜ್ಯದ ನಿವಾಸಿಗಳಾದ ಹಾಲಿ ಕೃಷ್ಣಾಪುರದಲ್ಲಿ ವಾಸವಿರುವ ಸುನಿಲ್ ಕುಮಾರ್, ಬ್ರಿಜೇಶ್ ಶ್ರೀವತ್ಸ ಎಂದು ಗುರುತಿಸಲಾಗಿದೆ. ಆರೋಪಿತರಿಂದ ಸುಮಾರು 1 ಕೆ.ಜಿ ಮಾದಕ ವಸ್ತು ಗಾಂಜಾವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿತರನ್ನು ವಿಚಾರಣೆ ನಡೆಸಿದಾಗ ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಲ್ಲಿ ಖರೀದಿಸಿ ರೈಲಿನಲ್ಲಿ ಮಂಗಳೂರಿಗೆ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬಜಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!