ಜನ ಮನದ ನಾಡಿ ಮಿಡಿತ

Advertisement

ಬೀದಿ-ಬದಿ ಅನಧಿಕೃತವಾಗಿ ಅಂಗಡಿ, ಗೂಡಂಗಡಿ ಮೂಲಕ ವ್ಯಾಪಾರ ವಹಿವಾಟುಗಳನ್ನು ನಡೆಸುವುದಕ್ಕೆ ಬೀಳಲಿದೆ ಬ್ರೇಕ್!

ಮಂಗಳೂರು: ಫುಟ್‌ಪ್ಯಾತ್ ಗಳಲ್ಲಿ ಅಡ್ಡಲಾಗಿ ಬಟ್ಟೆ ಬರೆಗಳು, ಇತರ ವಸ್ತು ವ್ಯಾಪಾರಗಳನ್ನು ಮಾಡುತ್ತಿರುವುದರಿಂದ ಜನರು ರಸ್ತೆಗೆ ಇಳಿದು ಹೋಗುವ ಪರಿಸ್ಥಿತಿ ಸೃಷ್ಟಿ ಮಾಡುತ್ತಿದೆ. ಇದರಿಂದ ವಾಹನ ಸವಾರರೂ ಜಾಗೃತವಾಗಿರಬೇಕು, ಇನ್ನೂ ಶಾಲಾ ಮಕ್ಕಳಿಗೂ ಇದರಿಂದ ತೊಂದರೆ ಆಗುತ್ತಿದೆ ಎಂದು ಹೇಳಲಾಗುತ್ತಿದೆ.
ಬೀದಿ-ಬದಿ ವ್ಯಾಪಾರಸ್ಥರು ಎಲ್ಲೆಂದರಲ್ಲಿ ಅನಧಿಕೃತವಾಗಿ ಅಂಗಡಿ, ಗೂಡಂಗಡಿ ಮೂಲಕ ಇತರೆ ವ್ಯಾಪಾರ ವಹಿವಾಟುಗಳನ್ನು ನಡೆಸುತ್ತಿರುವುದರಿಂದ ಸಾರ್ವಜನಿಕರಿಗೆ, ಪಾದಚಾರಿಗಳಿಗೆ ಓಡಾಡಲು ಹಾಗೂ ವಾಹನ ಸವಾರರಿಗೆ ರಸ್ತೆತಡೆ ಉಂಟಾಗಿ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಉದ್ದಿಮೆ ಪರವಾನಗಿ ಪಡೆಯದೇ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‍ಗಳಲ್ಲಿ ಕಾನೂನು ಬಾಹಿರವಾಗಿ ರಸ್ತೆ ಬದಿಯಲ್ಲಿ ಹಾಗೂ ಫುಟ್ ಪಾತ್‍ಗಳಲ್ಲಿ ಸಣ್ಣ ಪುಟ್ಟ ವ್ಯಾಪಾರ ವಹಿವಾಟುಗಳನ್ನು ನಡೆಸುತ್ತಿರುವುದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ಇದರ ಹಿನ್ನಲೆಯಲ್ಲಿ ಟೈಗರ್ ಕಾರ್ಯಾಚರಣೆ ಮೂಲಕ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿರುವ ಬೀದಿ-ಬದಿ ವ್ಯಾಪಾರಸ್ಥರ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!