ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ರೈಲ್ವೆ ನಿಲ್ದಾಣದ ಕಾಮಗಾರಿಯ ಗುಣಮಟ್ಟದ ಕುರಿತು ಸಾರ್ವಜನಿಕರಿಂದ ಅನುಮಾನ ವ್ಯಕ್ತ….!

ಅಮೃತ ಭಾರತ ಯೋಜನೆಯಡಿ ನವೀಕರಣಗೊಳ್ಳುತ್ತಿರುವ ಬಂಟ್ವಾಳ ರೈಲ್ವೆ ನಿಲ್ದಾಣದ ಕಾಮಗಾರಿಯ ಗುಣಮಟ್ಟದ ಕುರಿತು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸುತ್ತಿದ್ದರು.

ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ಹರಿದಾಡುತ್ತಿದ್ದು, ಇದರಲ್ಲಿ ಬಂಟ್ವಾಳ ರೈಲ್ವೆ ನಿಲ್ದಾಣದ ಕಂಪೌಂಡ್‌ನ ಕಲ್ಲುಗಳು ಕುಸಿದಿರುವುದು ಕಂಡುಬಂದಿದೆ. ಇದನ್ನು ಯಾರಾದರೂ ಉದ್ದೇಶ ಪೂರ್ವಕವಾಗಿ ಕೆಡವಿದರೋ ಅಥವಾ ಕಳಪೆ ಕಾಮಗಾರಿಯಿಂದಾಗಿ ಹೀಗಾಯಿತೋ ಎಂಬ ಅನುಮಾನ ಮೂಡುವಂತೆ ಈ ವಿಡಿಯೋದಲ್ಲಿರುವ ದೃಶ್ಯಗಳು ಕಂಡುಬರುತ್ತಿವೆ.

ಕೋಟಿಗಟ್ಟಲೆ ಖರ್ಚು ಮಾಡಿ ಮರು ನಿರ್ಮಾಣವಾಗುತ್ತಿರುವ ಬಂಟ್ವಾಳ ರೈಲ್ವೆ ನಿಲ್ದಾಣದ ಕೆಲಸ ಕಾರ್ಯಗಳ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಮಾಡಿದ್ದು, ಅಂದಿನ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ರಾಜೇಶ್ ನಾಯ್ಕ್ ಹಾಜರಿದ್ದಾರೆ. ಇದೀಗ ಈ ಭಾಗದ ರೈಲ್ವೆ ಸುರಕ್ಷಾ ಸಮಿತಿ, ಸಲಹಾ ಸಮಿತಿಯ ಸದಸ್ಯರು ಹಾಗೂ ಸಂಬಂಧಪಟ್ಟ ಶಾಸಕರು, ಸಂಸದರು ಕಾಮಗಾರಿ ವೀಕ್ಷಿಸಿ ಇದರ ಗುಣಮಟ್ಟವನ್ನು ಸಂಬಂಧಪಟ್ಟವರಿಂದ ಪರಿಶೀಲಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಒಂದು ವೇಳೆ ಕಿಡಿಗೇಡಿಗಳೇನಾದರೂ ಇಂಥ ಕೃತ್ಯವೆಸಗಿದರೆ, ಅವರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!