ಜನ ಮನದ ನಾಡಿ ಮಿಡಿತ

Advertisement

ವಿಜಯಪುರ: ತೋಟದಲ್ಲಿ ಕಂಡುಬಂದ ಜಿಪಿಎಸ್ ಅಳವಡಿಸಿದ ರಣಹದ್ದು; ಬೆಚ್ಚಿಬಿದ್ದ ಸ್ಥಳೀಯರು!

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದುವೊಂದು ಪತ್ತೆಯಾಗಿದೆ. ರಣಹದ್ದಿನಲ್ಲಿ ಟ್ರ‍್ಯಾಕರ್, ಜಿಪಿಎಸ್ ಹಾಗೂ ಕ್ಯಾಮರಾ ಮಾದರಿಯ ವಸ್ತು, ಜೊತೆಗೆ ಅದರ ಕಾಲಿನಲ್ಲಿ ಗುರುತಿನ ಸಂಖ್ಯೆಯ ಟ್ಯಾಗ್ ಇರುವುದು ಕಂಡುಬಂದಿದೆ.

ಅಸಹಜ ಸ್ಥಿತಿಯಲ್ಲಿದ್ದ ರಣಹದ್ದು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ರಣಹದ್ದನ್ನು ವಶಕ್ಕೆ ಪಡೆದು, ಝಳಕಿ ಪೊಲೀಸ್ ಠಾಣೆಗೆ ಕೊಂಡೊಯ್ದಿದ್ದಾರೆ. ನಂತರ ಠಾಣೆಗೆ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದಾಗ ಮಹಾರಾಷ್ಟ್ರದ ನಾಗಪೂರ ಬಳಿಯ ಮೇಲಘಾಣ ಪ್ರದೇಶದಿಂದ ರಣಹದ್ದು ಬಂದಿದೆ ಎನ್ನಲಾಗಿದೆ. ಜಿಪಿಎಸ್, ಟ್ರ‍್ಯಾಕರ್ ಭಾರವಾದ ಕಾರಣ ಪಕ್ಷಿ ಕೆಳಗೆ ಬಿದ್ದಿದೆ. ಮಹಾರಾಷ್ಟ್ರದ ಅರಣ್ಯ ಇಲಾಖೆಯಿಂದ ರಣಹದ್ದಿಗೆ ಜಿಪಿಎಸ್ ಹಾಗೂ ಟ್ರ‍್ಯಾಕರ್ ಅಳವಡಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದ್ದು ರಣಹದ್ದು ಸಂಖ್ಯೆ ಕಡಿಮೆಯಾಗಿರೋ ಕಾರಣ ಅಧ್ಯಯನಕ್ಕಾಗಿ ಅರಣ್ಯಾಧಿಕಾರಿಗಳು ಈ ಯೋಜನೆ ಮಾಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!