ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೀಗ ಹಾಕಿದ್ದ ಖಾಲಿ ಮನೆಗಳ ಬೀಗ ಒಡೆದು ಕಳ್ಳತನ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಮನೋತೋಷ್ ಕಾಯಲ್‌ನನ್ನು ಬಂಧಿಸಲಾಗಿದೆ.

ಆರೋಪಿಯು ಬೆಳಿಗ್ಗೆ ಬೇರೆ ಬೇರೆ ಪ್ರದೇಶಗಳಲ್ಲಿ ಸಂಚರಿಸಿ ತುಂಬಾ ದಿನಗಳಿಂದ ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಬೀಗ ಒಡೆದು ಕಳ್ಳತನ ಮಾಡುತ್ತಿದ್ದ. ಈ ಕುರಿತಂತೆ ಕಾರ್ಕಳ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಯನ್ನು ಪತ್ತೆ ಹಚ್ಚಿದ್ದು, ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.



