ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಚಲಿಸುತ್ತಿದ್ದ ಕಾರೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕ್ಷಣಾರ್ಧದಲ್ಲೇ ಕಾಣಿಸಿಕೊಂಡ ಬೆಂಕಿ!

ಬಂಟ್ವಾಳ-ಎಡಪದವು ರಾಜ್ಯ ಹೆದ್ದಾರಿಯ ಮುತ್ತೂರು ಸಮೀಪದ ನೂದೊಟ್ಟು ಎಂಬಲ್ಲಿ ಚಲಿಸುತ್ತಿದ್ದ ಕಾರೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.


ಎಡಪದವು ನಿವಾಸಿ ಧೀರೇಶ್ ಎಂಬವರು ತಮ್ಮ ಕುಟುಂಬದೊಂದಿಗೆ ಬಂಟ್ವಾಳದಿಂದ ಎಡಪದವು ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಮೂಲರಪಟ್ಣ ಸೇತುವೆಯ ಸಮೀಪ ತಲುಪಿದಾಗ ಹೆಡ್‌ಲೈಟ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ನೂದೊಟ್ಟು ಎಂಬ ಪ್ರದೇಶಕ್ಕೆ ಬರುತ್ತಿದ್ದಂತೆ ಕಾರಿನ ಮುಂಭಾಗದಿಂದ ಹೊಗೆ ಬರಲಾರಂಭಿಸಿದೆ. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರನ್ನು ನಿಲ್ಲಿಸಿ, ಕಾರಿನಲ್ಲಿದ್ದವರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಎಲ್ಲರೂ ಇಳಿಯುತ್ತಿದ್ದಂತೆ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಇಡೀ ವಾಹನಕ್ಕೆ ವ್ಯಾಪಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಹಾಗೂ ಹತ್ತಿರದ ಮನೆಗಳಿಂದ ನೀರು ತಂದು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೂ ಬೆಂಕಿಯ ಕೆನ್ನಾಲಿಗೆಗೆ ಕಾರಿನ ಅರ್ಧದಷ್ಟು ಭಾಗ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಭಾರೀ ನಷ್ಟ ಸಂಭವಿಸಿದೆ.

 

 

 

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!