ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ, ಕಾರ್ಮಿಕ ವರ್ಗ ಮತ್ತೆ ಗುಲಾಮಗಿರಿಯತ್ತ ಸಾಗಲಿದೆ ಎಂದು ಫಣೀಂದ್ರ ಕೆ ಎಚ್ಚರಿಸಿದ್ದಾರೆ.

ಕಾರ್ಮಿಕ ವರ್ಗದ ಹಿತಾಸಕ್ತಿಗಳನ್ನು ಕಾಪಾಡಬೇಕಾದ ಕೇಂದ್ರ ಸರಕಾರವು ನಿತ್ಯ ನಿರಂತರವಾಗಿ ಕಾರ್ಪೊರೇಟ್‌ಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆ. ಆ ಮೂಲಕ ಕಾರ್ಪೊರೇಟ್ ಸರಕಾರವಾಗಿದೆ. ಹಸಿವು ಮುಕ್ತ, ಬಡತನ ಮುಕ್ತ, ನಿರುದ್ಯೋಗ ಮುಕ್ತ ಭಾರತವಾಗಿ ನಿರ್ಮಾಣ ಮಾಡುವ ಬದಲು ಯೂನಿಯನ್ ಮುಕ್ತ ಭಾರತವನ್ನಾಗಿ ನಿರ್ಮಿಸಲು ಹೊರಟಿದೆ. ಈ ಮೂಲಕ ಕಾರ್ಮಿಕ ವರ್ಗವನ್ನು ಮತ್ತೆ ಗುಲಾಮರನ್ನಾಗಿಸಿ ಅತ್ಯಂತ ಹೀನಾಯವಾಗಿ ಶೋಷಣೆ ಮಾಡಲು ಹೊರಟಿದೆ ಎಂದು ಕರ್ನಾಟಕ ಬ್ಯಾಂಕ್ ನೌಕರರ ಸಂಘಟನೆಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಫಣೀಂದ್ರ ಕೆ ಆಕ್ರೋಶ ವ್ಯಕ್ತಪಡಿಸಿದರು.

ಅವರು ಕೇಂದ್ರ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಫೆಬ್ರವರಿ 12ರ ಅಖಿಲ ಭಾರತ ಮಹಾಮುಷ್ಕರದ ಪ್ರಚಾರಾರ್ಥವಾಗಿ ಆಯೋಜಿಸಲ್ಪಟ್ಟ ದ.ಕ.ಜಿಲ್ಲಾ ಮಟ್ಟದ ವಾಹನ ಪ್ರಚಾರ ಜಾಥಾವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾದ ದ.ಕ.ಜಿಲ್ಲಾ ಬ್ಯಾಂಕ್ ನೌಕರರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನ್ಸೆಂಟ್ ಡಿಸೋಜರವರು ಮಾತನಾಡುತ್ತಾ, ರಾಷ್ಟ್ರೀಕೃತ ಬ್ಯಾಂಕ್‌ಗಳನ್ನು ವಿಲೀನೀಕರಣದ ಹೆಸರಿನಲ್ಲಿ ಸರ್ವನಾಶ ಮಾಡುವ ಮೂಲಕ ದೇಶದ ಅರ್ಥ ವ್ಯವಸ್ಥೆಯನ್ನು ಬಿಕ್ಕಟ್ಟಿಗೆ ಸಿಲುಕಿಸಲಾಗಿದೆ.

ವಿಮಾ ಕ್ಷೇತ್ರದಲ್ಲೂ 100%ದಷ್ಟು ವಿದೇಶಿ ನೇರ ಹೂಡಿಕೆಯನ್ನು ಮಾಡಿ ವಿದೇಶೀ ವಿಮಾ ಸಂಸ್ಥೆಗಳಿಗೂ ಮುಕ್ತ ಅವಕಾಶ ನೀಡಿದೆ ಎಂದು ಹೇಳಿದರು. ಬ್ಯಾಂಕ್ ನೌಕರರ ರಾಜ್ಯ ಮುಖಂಡರಾದ ಬಿ ಎಂ ಮಾಧವರವರು ಮಾತನಾಡಿ, ಕಳೆದ 12 ವರ್ಷಗಳಲ್ಲಿ ದೇಶದ ಸಂಪತ್ತನ್ನು ಅಂಬಾನಿ ಅದಾನಿಗಳು ಸೇರಿದಂತೆ ಕಾರ್ಪೊರೇಟ್ ಕಂಪೆನಿಗಳಿಗೆ ಮಾರಾಟ ಮಾಡುವ ಮೂಲಕ ಇಡೀ ದೇಶವನ್ನೇ ಅಂಬಧಾನಿ ಮಾಡಲು ಹೊರಟಿದೆ ಸರಕಾರ ಎಂದು ಹೇಳಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!