ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ..!

ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ ರೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದು ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ರೂಪಾಯಿ ಹತ್ತು ಲಕ್ಷ ಮೌಲ್ಯದ 201 ಮೊಬೈಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಮಾರ್ಚ್ 9ರಂದು ಮುಂಜಾನೆ ಸುಮಾರು 3 ಗಂಟೆಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಆಗಮಿಸಿದ ಜಾಮ್‌ನಗರ -ತಿರುನಲ್ವೇಲಿ ಜಂಕ್ಷನ್ ಎಕ್ಸ್ಪ್ರೆಸ್ ರೈಲಿನಲ್ಲಿ ತಪಾಸಣೆ ಕೈಗೊಳ್ಳಲಾಗಿದೆ. ರೈಲಿನ ಸಾಮಾನ್ಯ ಬೋಗಿಯ ಮೇಲಿನ ಲಗೇಜ್ ರಾಕ್‌ನಲ್ಲಿ ವಾರೀಸುದಾರರು ಇಲ್ಲದ ಮೂರು ಬ್ಯಾಗ್‌ಗಳನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ನೂರಾರು ಬಳಕೆಯಾದಂತಹ ಮೊಬೈಲ್‌ಗಳು ಪತ್ತೆಯಾಗಿವೆ. ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ಆರ್‌ಪಿಎಫ್ ಹೆಡ್ ಕಾನ್ಸ್ಟೇಬಲ್ ಸುಜೀಶ್ ಮತ್ತು ಕಾನ್ಸ್ಟೇಬಲ್ ರಾಮಕೃಷ್ಣ ಅವರು ತಪಾಸಣೆ ಕೈಗೊಂಡು ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಚುನಾವಣಾ ಸಮಯದಲ್ಲಿ ನಗದು, ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳ ಅಕ್ರಮ ಸಾಗಾಟವನ್ನು ಪತ್ತೆಹಚ್ಚುವುದಕ್ಕಾಗಿ ತಪಾಸಣಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ರೈಲು ನಿಲ್ದಾಣದ ಸಿಸಿಟಿವಿ ಇನ್ನಿತರ ದೃಶ್ಯಗಳನ್ನು ಪರಿಶೀಲಿಸಿದಾಗ, ಬ್ಯಾಗ್‌ಗಳು ಪತ್ತೆಯಾದ ಸಮಯದಲ್ಲಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡುಬAದಿದೆ. ಹೀಗಾಗಿ ಅಪರಾಧ ವಿಭಾಗದ ಗುಪ್ತಚರ ದಳ ಮತ್ತು ರೈಲ್ವೆ ಪೊಲೀಸರು ಇಬ್ಬರು ಶಂಕಿತರಿಗಾಗಿ ಶೋಧ ನಡೆಸುತ್ತಿದ್ದಾರೆ. ಮೊಬೈಲ್‌ಗಳನ್ನು ಎಲ್ಲಿಗೆ, ಯಾವ ಉದ್ದೇಶಕ್ಕಾಗಿ ಒಯ್ಯಲಾಗುತ್ತಿತ್ತು. ಇದರ ಹಿಂದೆ ಯಾರಿದ್ದಾರೆ ಎನ್ನುವುದರ ಬಗ್ಗೆ ತನಿಖೆ ಆಗಬೇಕಷ್ಟೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!