ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಆಲ್ಟೋ ಕಾರು ಮತ್ತು 5 ಬೈಕ್‌ಗಳಿಗೆ ಡಿ*ಕ್ಕಿಯಾಗಿ ಪರಾರಿಯಾದ ಸ್ವಿಫ್ಟ್ ಕಾರು…!

ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮದ ಸಂಟ್ಯಾರು ಜಂಕ್ಷನ್ ಬಳಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಮಾರುತಿ ಸ್ವಿಫ್ಟ್ ಕಾರೊಂದು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಮಾರುತಿ ಆಲ್ಟೋ ಕಾರು ಹಾಗೂ 5 ಬೈಕ್‌ಗಳಿಗೆ ಡಿಕ್ಕಿ ಹೊಡೆದು, ಆರೋಪಿ ಚಾಲಕ ಕಾರಿನೊಂದಿಗೆ ಪರಾರಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಘಟನೆಗೆ ಸಂಬಧಿಸಿ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ವಿಫ್ಟ್ ಕಾರು ಆರಂಭದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದ ಬೈಕ್ ಸಹಸವಾರ ಬಂಟ್ವಾಳದ ನಿವಾಸಿ ರವಿ ಬಿ ಅವರು ಘಟನೆಗೆ ಸಂಬಂಧಿಸಿ ಸಂಪ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗುರುವಾರ ಸಂಜೆ ಕಾರ್ತಿಕ್ ಎಂಬವರ ಬೈಕಿನಲ್ಲಿ ರವಿ ಹಾಗೂ ಕಾರ್ತಿಕ್ ಅವರು ಸವಾರನಾಗಿ, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಸಂಟ್ಯಾರ್ ಜಂಕ್ಷನ್ ಬಳಿಗೆ ತಲುಪಿದಾಗ, ಹಿಂದಿನಿಂದ ಬಂದ ಕಾರು ಅದರ ಚಾಲಕನು ತೀರಾ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ರವಿ ಮತ್ತು ಸವಾರ ಕಾರ್ತಿಕ್ ಅವರು ರಸ್ತೆಗೆ ಎಸೆಯಲ್ಪಟ್ಟು ಗಾಯವಾಗಿದೆ.

ಬಳಿಕ ಅಪಘಾತ ಎಸಗಿದ ಆರೋಪಿ ಕಾರು ಚಾಲಕನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ 5 ಬೈಕ್‌ಗಳಿಗೆ ಡಿಕ್ಕಿ ಹೊಡೆದಿದ್ದು, ಆ ಬೈಕ್‌ಗಳು ಜಖಂಗೊಂಡಿವೆ ಎಂದು ರವಿ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಸಂಪ್ಯ ಠಾಣೆಯ ಪೊಲೀಸರು ಆರೋಪಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಲ್ಟೋ ಕಾರು ಮತ್ತು 5 ಬೈಕ್‌ಗಳಿಗೆ ಡಿಕ್ಕಿ ಹೊಡೆದ ಕಾರಿನ ಚಾಲಕ ಪುತ್ತೂರಿನ ವಿದ್ಯಾಸಂಸ್ಥೆಯೊಂದರಲ್ಲಿ 8ನೇ ತರಗತಿಯಲ್ಲಿ ಕಲಿಯುತ್ತಿದ್ದ ಅರಿಯಡ್ಕ ಗ್ರಾಮ ವ್ಯಾಪ್ತಿಯ ಅಪ್ರಾಪ್ತ ಬಾಲಕನೆಂಬ ಮಾಹಿತಿ ಲಭಿಸಿದೆ. ಆರಂಭದಲ್ಲಿ ಮುಂದಿನಿಂದ ತೆರಳುತ್ತಿದ್ದ ಬೈಕೊಂದಕ್ಕೆ ಡಿಕ್ಕಿ ಹೊಡೆದ ವೇಳೆ ಆತ ಗಾಬರಿಗೊಂಡ ಪರಿಣಾಮವಾಗಿ ಕಾರು ನಿಯಂತ್ರಣ ಕಳಕೊಂಡು ಯದ್ವಾತದ್ವ ಚಲಿಸಿದೆ ಎಂದು ಮಾಹಿತಿ ಲಭಿಸಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!