ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್ ಪ್ರಯಾಣ..!

ರಾಜ್ಯದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳ ದಿನಗಣನೆ ಆರಂಭವಾಗುತ್ತಿದ್ದಂತೆ, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಮಹತ್ವದ ಕ್ರಮವೊಂದನ್ನು ಘೋಷಿಸಿದ್ದಾರೆ.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಪ್ರಕಟಿಸಿದ್ದು, ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಇದು ದೊಡ್ಡ ಸಮಾಧಾನ ತಂದಿದೆ. 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:15 ರವರೆಗೆ ಪರೀಕ್ಷೆಗಳು ಜರುಗಲಿವೆ. ರಾಜ್ಯಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಮತ್ತು ಬರಲು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಬಸ್ ನಿರ್ವಾಹಕರಿಗೆ ತಮ್ಮ ಹಾಲ್ ಟಿಕೆಟ್ ತೋರಿಸುವ ಮೂಲಕ ಈ ಸೌಲಭ್ಯವನ್ನು ಪಡೆಯಬಹುದು. ಉಚಿತ ಪ್ರಯಾಣದ ಸೌಲಭ್ಯವನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳು ತಪ್ಪದೇ ತಮ್ಮ ಹಾಲ್ ಟಿಕೆಟ್ ಅನ್ನು ಜೊತೆಯಲ್ಲಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!