ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದವನಿಗೆ ವಿನೂತನ ಶಿಕ್ಷೆ….!

ಸಂಚಾರ ನಿಯಮ ಉಲ್ಲಂಘಿಸಿದವನಿಗೆ ನ್ಯಾಯಾಲಯದಿಂದ ವಿನೂತನ ಶಿಕ್ಷೆ ವಿಧಿಸಲಾಗಿದೆ. 15 ದಿನಗಳ ಕಾಲ `ಸಮುದಾಯ ಸೇವೆ’ಗೆ ಆದೇಶ ಮಾಡಲಾಗಿದೆ. ಪದೇ ಪದೇ ಸಂಚಾರ ನಿಯಮಗಳನ್ನು ಗಾಳಿಗೆ ತೂರುತ್ತಿದ್ದ ಸವಾರನೊಬ್ಬನಿಗೆ ಸುಳ್ಯದ ನ್ಯಾಯಾಲಯವು ದಂಡದ ಜೊತೆಗೆ ಸಾರ್ವಜನಿಕವಾಗಿ ಸಂಚಾರ ನಿಯಮಗಳ ಅರಿವು ಮೂಡಿಸುವ ವಿಶಿಷ್ಟ ಶಿಕ್ಷೆಯನ್ನು ವಿಧಿಸಿದೆ.

ಸುಳ್ಯ ನಿವಾಸಿ ರಕ್ಷಿತ್ ಜಿ. ಎಂಬುವವರು ಸುಳ್ಯ ಪೇಟೆಯಲ್ಲಿ ಸಂಚಾರ ನಿಯಮಗಳನ್ನು ಸತತವಾಗಿ ಉಲ್ಲಂಘಿಸಿದ್ದರು. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಸಂತೋಷ್ ಬಿ.ಪಿ. ಅವರು ಐಎಂವಿ ಕಾಯ್ದೆಯಡಿ ಮೂರು ಪ್ರತ್ಯೇಕ ಲಘು ಪ್ರಕರಣಗಳನ್ನು ದಾಖಲಿಸಿದ್ದರು. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಳ್ಯದ ಮಾನ್ಯ ಎಸ್.ಸಿ.ಜೆ. ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ಎರಡು ಪ್ರಕರಣಗಳಲ್ಲಿ ಒಟ್ಟು 3,000 ರೂಪಾಯಿ ದಂಡ ವಿಧಿಸಿದೆ. ಸಮುದಾಯ ಸೇವೆ ಎಂಬುದು ಈ ತೀರ್ಪಿನ ವಿಶೇಷತೆಯಾಗಿದ್ದು, ಆರೋಪಿಯು ಒಟ್ಟು ಮೂರು ಪ್ರಕರಣಗಳಲ್ಲಿ ತಲಾ 5 ದಿನಗಳಂತೆ ಒಟ್ಟು 15 ದಿನಗಳ ಕಾಲ ಸುಳ್ಯ ಪೇಟೆಯ ಪ್ರಮುಖ ಜಂಕ್ಷನ್‌ಗಳಲ್ಲಿ ನಿಂತು ಸಾರ್ವಜನಿಕರಿಗೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಬೇಕು.

‘ಜಾಗೃತಿ ಫಲಕ ಹಿಡಿಯಬೇಕು: ಶಿಕ್ಷೆಯ ಅವಧಿಯಲ್ಲಿ ಸಂಚಾರ ನಿಯಮಗಳ ಅರಿವು ಮೂಡಿಸುವ ಫಲಕಗಳನ್ನು ಹಿಡಿದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ನ್ಯಾಯಾಲಯ ಸೂಚಿಸಿದೆ. ಜೊತೆಗೆ ಪರವಾನಗಿಯನ್ನು ಮೂರು ತಿಂಗಳ ಕಾಲ ಅಮಾನತಿನಲ್ಲಿಡಲು ಆದೇಶಿಸಲಾಗಿದೆ. ಸಂಚಾರ ನಿಯಮಗಳನ್ನು ಮೀರುವವರಿಗೆ ಈ ತೀರ್ಪು ಒಂದು ಎಚ್ಚರಿಕೆಯ ಸಂದೇಶವಾಗಿದ್ದು, ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!