ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಭೂ ವ್ಯವಹಾರಕ್ಕೆ ಸಂಬAಧಿಸಿ ನಡೆದೇ ಹೋಯಿತು ಕೊಲೆಯತ್ನ; ಆರೋಪಿ ಬಂಧನ..!

ಭೂ ವ್ಯವಹಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆಸಿ ಕೊಲೆಗೆ ಯತ್ನಿಸಿದಂತಹ ಭಯಾನಕ ಘಟನೆ ನಿನ್ನೆ (ಮಾ.17)ರಂದು ಮಂಗಳೂರು ನಗರದಲ್ಲಿ ನಡೆದಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಗಾಯಗೊಂಡ ದ್ವಿಚಕ್ರ ವಾಹನ ಸವಾರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಲಿಕಟ್ಟೆಯ ನಿವಾಸಿ ಮೋಹನ್ ದಾಸ್ ಶೆಟ್ಟಿ (56) ಘಟನೆಯಲ್ಲಿ ಗಾಯಗೊಂಡವರು ಎಂದು ಗುರುತಿಸಲಾಗಿದೆ. ಫಳ್ನೀರ್ ನಿವಾಸಿ ಮಹಮ್ಮದ್ ಶರೀಫ್ (26) ಬಂಧಿತ ಆರೋಪಿಯಾಗಿದ್ದಾನೆ. ಭೂ ವ್ಯವಹಾರಕ್ಕೆ ಸಂಬಂಧಿಸಿ ಆರೋಪಿ ಮಹಮ್ಮದ್ ಶರೀಫ್ ಸುರತ್ಕಲ್ ಕಾನ ವಾಮಂಜೂರಿನಲ್ಲಿ ಸುಮಾರು 2 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದ. ಇದಕ್ಕೆ ಸಂಬಂಧಿಸಿ ಮಲ್ಲಿಕಟ್ಟೆಯ ಮೋಹನ್ ದಾಸ್ ಶೆಟ್ಟಿ ಅವರು ತನಗೆ ಮೋಸ ಮಾಡಿದ್ದಾರೆಂದು ಸಿಟ್ಟಿನಿಂದ ಮಂಗಳವಾರ ಪೂರ್ವಾಹ್ನ 11 ಗಂಟೆ ವೇಳೆಗೆ ಮಂಗಳೂರು ನಗರದ ಆರ್ಯ ಸಮಾಜ ರಸ್ತೆಯ ಬದಿಯಲ್ಲಿ ಮಾತುಕತೆ ನಡೆಸಿದ ಸಂದರ್ಭ ಆರೋಪಿ ಸಿಟ್ಟಿನಲ್ಲಿ ಮೋಹನ್ ದಾಸ್ ಶೆಟ್ಟಿಯ ಮೊಬೈಲನ್ನು ಕಸಿದುಕೊಂಡಿದ್ದ. ಬಳಿಕ ಮೋಹನ್‌ದಾಸ್ ಶೆಟ್ಟಿ ತನ್ನ ದ್ವಿಚಕ್ರ ವಾಹನವನ್ನು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಆರೋಪಿ ಮಹಮ್ಮದ್ ಶರೀಫ್ ತನ್ನ ಕಾರನ್ನು ಅತಿ ವೇಗವಾಗಿ ಚಲಾಯಿಸಿಕೊಂಡು ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆಸಿ ಕೊಲೆ ಮಾಡಲು ಯತ್ನಿಸಿದ್ದ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿರುವ ಕದ್ರಿ ಪೊಲೀಸರು ಆರೋಪಿ ಶರೀಫ್‌ನನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!