ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ- ಯುವಕ ಮೃ*ತ್ಯು…!

ಟಿಪ್ಪರ್ ಲಾರಿಯೊಂದು ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಕಾರ್ಕಳದ ಪಳ್ಳಿ ಅಡಪಾಡಿ ಹತ್ತಿರ ನಡೆದಿದೆ.

ಮೃತಪಟ್ಟ ಯುವಕನನ್ನು ಹಿರಿಯಡ್ಕ ಕುಜಂಬೈಲು ನಿವಾಸಿ ಗಣೇಶ್ ನಾಯಕ್ ಎಂದು ಗುರುತಿಸಲಾಗಿದೆ. ಗಣೇಶ್ ನಾಯಕ್ ಅವರು ತನ್ನ ಬೈಕ್‌ನಲ್ಲಿ ಹಂಪನಕಟ್ಟೆ ಕಡೆಗೆ ಹೋಗುತ್ತಿರುವಾಗ ಆರೋಪಿ ತನ್ನ ಟಿಪ್ಪರ್ ಲಾರಿಯನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮೋಟಾರ್ ಸೈಕಲ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಗಣೇಶ ನಾಯಕ್ ಇವರು ಮೋಟಾರ್ ಸೈಕಲ್ ಸಮೇತ ರಸ್ತೆಯಲ್ಲಿ ಬಿದ್ದರು. ಈ ಸಂದರ್ಭದಲ್ಲಿ ಟಿಪ್ಪರ್ ಲಾರಿಯ ಹಿಂಬದಿಯ ಟಯರ್ ಹೆಲ್ಮೆಟ್ ಹಾಕಿದ ಗಣೇಶ ನಾಯಕ್ ಅವರ ತಲೆಯ ಮೇಲೆ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಗಣೇಶ ನಾಯಕ್ ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!