ದ.ಕ.ಲೋಕಸಭಾ ಕ್ಷೇತ್ರದ ಸದಸ್ಯ ಕ್ಯಾ.ಬ್ರಿಜೇಶ್ ಚೌಟ ಅವರು ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದಿದ್ದಾರೆ.

ಸಂಸದರಾಗಿ ಕಾರ್ಯ ಶೈಲಿಯ ಕುರಿತು ಮಾಹಿತಿ ಪಡೆದುಕೊಂಡ ಪೂಜಾರಿಯವರು ಉತ್ತಮವಾಗಿ ಕೆಲಸ ಮಾಡುವಂತೆ ಶುಭಹಾರೈಸಿದ್ದಾರೆ. ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಅವರು ಈ ಸಂದರ್ಭದಲ್ಲಿ ಜತೆಗಿದ್ದರು.



