ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಲ್ಲಡ್ಕದ ಯುವ ಉದ್ಯಮಿ ಸಂಪಾಜೆ ಸಮೀಪದ ಗೂನಡ್ಕದಲ್ಲಿ ಶವವಾಗಿ ಪತ್ತೆ..!

ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಉದ್ಯಮ ನಡೆಸುತ್ತಿದ್ದ ಯುವಕನೊಬ್ಬ ಸಂಪಾಜೆ ಸಮೀಪದ ಗೂನಡ್ಕದ ಲಾಡ್ಜ್ ಒಂದರ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೃತ ವ್ಯಕ್ತಿಯನ್ನು ಪಾಣೆಮಂಗಳೂರು ಹೊರವಲಯದ ಬೊಂಡಾಲ ಶಾಂತಿಗುಡ್ಡೆ ನಿವಾಸಿ, ನಾರಾಯಣ ಕುಲಾಲ್ ಅವರ ಪುತ್ರ ತಿಲಕರಾಜ್ (28) ಎಂದು ಗುರುತಿಸಲಾಗಿದೆ. ಇವರು ಮಾರ್ಚ್ 19ರಂದು ಅನಂತಾಡಿಯ ಮನೆಯೊಂದರ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಕೆಲಸಕ್ಕೆ ಬೇಕಾದ ಮೆಟೀರಿಯಲ್ ಹಾಕಿ ಬಂದಿದ್ದರು. ಮಾರ್ಚ್ 20ರ ಸಂಜೆಯಿಂದ ಮನೆಯವರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ತಿಲಕರಾಜ್ ಅವರು ಕಲ್ಲಡ್ಕದಿಂದ ಮಡಿಕೇರಿ ರಸ್ತೆಯ ಮೂಲಕ ತನ್ನ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಮಾರ್ಚ್ 20ರ ಸಂಜೆ ವೇಳೆಗೆ ಸಂಪಾಜೆ ಸಮೀಪದ ಗೂನಡ್ಕದಲ್ಲಿ ರೂಮ್ ಮಾಡಿಕೊಂಡಿದ್ದರು. ಮಾರ್ಚ್ 21ರ ಬೆಳಗ್ಗೆ ರೂಮ್‌ನ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದ ಬಳಿಕ, ಸಮಾಜ ಸೇವಕ ತಾಜ್ ಟೀಲಿಯವರ ಸಹಕಾರದೊಂದಿಗೆ ಕಿಟಕಿ ಮೂಲಕ ಒಳ ಪ್ರವೇಶಿಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಯುವ ಉದ್ಯಮಿಯಾಗಿದ್ದ ಇವರಿಗೆ ಯಾವುದೇ ಸಾಲಬಾಧೆ ಅಥವಾ ಆರ್ಥಿಕ ಸಮಸ್ಯೆಗಳು ಮೇಲ್ನೋಟಕ್ಕೆ ಕಂಡುಬಂದಿಲ್ಲ. ಉತ್ತಮವಾಗಿ ಉದ್ಯಮ ನಡೆಸುತ್ತಿದ್ದ ಇವರು ಇಂತಹ ಕಠಿಣ ನಿರ್ಧಾರ ಕೈಗೊಳ್ಳಲು ಕಾರಣವೇನೆಂಬುದು ನಿಗೂಢವಾಗಿದೆ. ಸದ್ಯ ಮೃತದೇಹವನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!