ಜನ ಮನದ ನಾಡಿ ಮಿಡಿತ

Advertisement

ಧರ್ಮಸ್ಥಳ: ಮರ್ಧಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ; ಮೂವರಿಗೆ ಗಂಭೀರ ಗಾಯ…!

ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ 37ರಲ್ಲಿ ಮರ್ಧಾಳ ಬ್ರಾಂತಿಕಟ್ಟೆ ಸಮೀಪ ಮಾರ್ಚ್ 23ರಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಇಕೊ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ 9 ಜನರಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡವರನ್ನು ಮಂಜುನಾಥ, ಪ್ರಮೋದ್ ಮತ್ತು ತುಳಸಿ ಎಂದು ಗುರುತಿಸಲಾಗಿದೆ. ಇತರರಾದ ಪ್ರಿಯಾ, ವಿಠಲ, ಚಾಲಕ ಪ್ರೇಮಣ್ಣ, ಧನಲಕ್ಷ್ಮಿ ಹಾಗೂ ಸಮರ್ಥ ಸಂಜನಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳುಗಳು ಸಾಗರ ಮೂಲದವರಾಗಿದ್ದಾರೆ. ಗಾಯಗೊಂಡವರನ್ನು ತಕ್ಷಣ ಕಡಬ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಹಾಗೂ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!