ಜನ ಮನದ ನಾಡಿ ಮಿಡಿತ

Advertisement

ಬೈಂದೂರು: ತಲ್ಲೂರು ಸೇತುವೆ ಬಳಿ ಸರಣಿ ಡಿ*ಕ್ಕಿ; ಪ್ರಯಾಣಿಕರು ಪ್ರಾಣಪಾಯದಿಂದ ಪಾರು…!

ಬೈಂದೂರು – ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66 ರ ತಲ್ಲೂರು ಸೇತುವೆಯ ತಡೆಗೋಡೆಗೆ ಮಹಾರಾಷ್ಟ್ರ ಮೂಲದ ಗೂಡ್ಸ್ ವಾಹನ ಡಿಕ್ಕಿಯಾಗಿದೆ.

ನಂತರ ಗೂಡ್ಸ್ ವಾಹನಕ್ಕೆ ಅದರ ಹಿಂದೆ ಬರುತ್ತಿದ್ದ ಕಾರು ಢಿಕ್ಕಿಯಾದ ಘಟನೆ ನಡೆದಿದೆ. ಕಾರಿನಲ್ಲಿದ್ದ ಚಾಲಕ ಸಹಿತ ಪ್ರಯಾಣಿಕರು, ಗೂಡ್ಸ್ ವಾಹನ ಚಾಲಕ ಎಲ್ಲರೂ ಗಾಯಗೊಂಡು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೂಡ್ಸ್ ವಾಹನ ವೇಗವಾಗಿ ಬಂದು ಸೇತುವೆಯ ತಡೆಗೋಡೆಗೆ ಢಿಕ್ಕಿಯಾಗಿದೆ. ಹಿಂದಿನಿಂದ ಬಂದು ಢಿಕ್ಕಿಯಾದ ಕಾರಿನ ಏರ್ ಬ್ಯಾಗ್ ತೆಗೆದುಕೊಂಡಿದೆ. ಅಪಘಾತದ ತೀವ್ರತೆಗೆ ಕಾರು ಹಾಗೂ ಗೂಡ್ಸ್ ವಾಹನಗಳೆರಡು ನಜ್ಜು ಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರ ಠಾಣೆ ಎಸ್ ಐ ಅನೂಪ್ ನಾಯಕ್ ಹಾಗೂ ಸಿಬಂದಿ ಭೇಟಿ ನೀಡಿದ್ದಾರೆ. ಸಂಚಾರ ದಟ್ಟಣೆ ವೇಳೆ ಅಪಘಾತ ನಡೆದ ಕಾರಣ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳು ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತಿದ್ದವು.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!