ಜನ ಮನದ ನಾಡಿ ಮಿಡಿತ

Advertisement

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಿಲ್ಲಿಸಿದ್ದ ಸ್ಕೂಟರ್‌ಗೆ ಹಿಂಬದಿಯಿಂದ ಕೆ.ಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರು ಗಾಯಗೊಂಡ ಘಟನೆ ಬಂಟ್ವಾಳ – ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಜಾಲಕಟ್ಟೆ ಬಸವನಗುಡಿ ಎಂಬಲ್ಲಿ ಸಂಭವಿಸಿದೆ.

ಸ್ಕೂಟರ್ ಸವಾರರಾದ ಬಡಗಕಜೆಕಾರು ಅಂಚೆ ಕಛೇರಿ ತಾತ್ಕಾಲಿಕ ಪೋಸ್ಟ್ ಮಾಸ್ಟರ್, ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ನಿವಾಸಿ ಶ್ರೇಯಸ್ ಹಾಗೂ ಸಹೋದ್ಯೋಗಿ ಶಾಲಿನಿ ಅವರು ಗಾಯಗೊಂಡಿದ್ದು, ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಶ್ರೇಯಸ್ ಅವರು ಅಂಚೆ ಇಲಾಖೆಯ ಕೆಲಸದ ನಿಮಿತ್ತ ಕೇಂದ್ರ ಅಂಚೆ ಕಛೇರಿಯಾದ ಬಸವನಗುಡಿಯಲ್ಲಿರುವ ಪುಂಜಾಲಕಟ್ಟೆ ಅಂಚೆ ಕಛೇರಿಗೆಂದು ಶಾಲಿನಿ ಯು. ಅವರನ್ನು ಸಹಸವಾರರಾಗಿ ಕುಳ್ಳಿರಿಸಿಕೊಂಡು ಬಸವನಗುಡಿ ಎಂಬಲ್ಲಿರುವ ಅಂಚೆ ಕಛೇರಿಯ ಮುಂಭಾಗ ತಲುಪಿ ಕೇಂದ್ರ ಅಂಚೆ ಕಛೇರಿಗೆ ಹೋಗಲು ಆಕ್ಟಿವಾ ಸ್ಕೂಟರ್‌ನ್ನು ಇಂಡಿಕೇಟರ್ ಹಾಕಿ ನಿಲ್ಲಿಸಿದಾಗ ಅವರ ಹಿಂದಿನಿಂದ ಬರುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್‌ನ ಚಾಲಕನಾದ ಮಂಜುನಾಥ ಉಪ್ಪಾರ ಎಂಬಾತನು ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿಕೊಂಡು ಬಂದು ಶ್ರೇಯಸ್ ಅವರ ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಶ್ರೇಯಸ್ ಹಾಗೂ ಸಹಸವಾರೆ ಶಾಲಿನಿ ಯು. ಅವರು ಸ್ಕೂಟರ್ ಸಮೇತ ಡಾಮಾರು ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!