ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ ಜಖಂಗೊಂಡಿದೆ.

ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಸಂಪೂರ್ಣವಾಗಿ ಮುಗಿಯುತ್ತಾ ಬಂದಿದ್ದು, ವಾಹನಗಳು ನಿಯಂತ್ರಣಕ್ಕೆ ಸಿಗದ ವೇಗದಲ್ಲಿ ಅಪಾಯಕಾರಿಯಾಗಿ ಹೋಗುವುದರಿಂದ ಹೆಚ್ಚೆಚ್ಚು ಅಪಘಾತಗಳು ಸಂಭವಿಸುತ್ತಾ ಇದೆ ಎಂದು ಸಾರ್ವಜನಿಕರು ಅಭಿಪ್ರಾಯ ಪಡುತ್ತಿದ್ದಾರೆ.



