ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ ಎ.20ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.

ಸಂಘದ ಜಿಲ್ಲಾಧ್ಯಕ್ಷೆ ತಾರಾ ಬಲ್ಲಾಳ್ ಈ ವಿಷಯ ತಿಳಿಸಿದ್ದಾರೆ. ಅವರು ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮವನ್ನು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಕ್ಯಾ. ಬ್ರಿಜೇಶ್ ಚೌಟ ಸಹಿತ ರಾಜಕೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಸಮಾವೇಶದಲ್ಲಿ ಸುಮಾರು 2,500 ಮಂದಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಭಾಗವಹಿಸಲಿದ್ದಾರೆ. ಸಂಘದ ಪದಾಧಿಕಾರಿಗಳಾಗಿದ್ದು, ನಿವೃತ್ತರಾದವರಿಗೆ ಸನ್ಮಾನ ನಡೆಯಲಿದ್ದು, ಸಂಘದ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿವೆ ಎಂದಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಸಂಘದ ಸದಸ್ಯರಾದ ವಿಶಾಲಾಕ್ಷಿ, ಆಶಾಲತಾ, ಚಂದ್ರಾವತಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!