ಜನ ಮನದ ನಾಡಿ ಮಿಡಿತ

Advertisement

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು, ಒಂದು ವರ್ಷದ ನಂತರ ಘಟನೆ ಬೆಳಕಿಗೆ ಬಂದಿದೆ.

ಮೃತ ನುಣಕಮ್ಮ ಎಂಬುವವರ ಅಣ್ಣನ ಮಗಳು ನಾಗಲಕ್ಷ್ಮಿ ಮತ್ತು ಆಕೆಯ ಪ್ರಿಯಕರ, ಆಂಧ್ರಪ್ರದೇಶದ ಮಡಕಸಿರ ನಿವಾಸಿ ಅಶೋಕ್ ಕುಮಾರ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ನುಣಕಮ್ಮ ಅವರಿಗೆ ಗಂಡ ಮತ್ತು ಮಕ್ಕಳಿರಲಿಲ್ಲ, ಅವರು ತಮ್ಮ ಅಣ್ಣನ ಮನೆಯಲ್ಲಿ ವಾಸವಿದ್ದರು. ಸೆಪ್ಟೆಂಬರ್ 20 ನುಣಕಮ್ಮ ಅವರಿಗೆ ಪಿಡ್ಸ್ ಬರುತ್ತಿದೆ, ಚಿಕಿತ್ಸೆ ಕೊಡಿಸುತ್ತೇವೆ ಎಂದು ನಂಬಿಸಿದ ಆರೋಪಿಗಳು ಅವರನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ನುಣಕಮ್ಮಳ ಬಳಿ ಇದ್ದ ಮನೆಯ ಬೀರು ಬೀಗ ತೆಗೆದುಕೊಂಡು, ಆಕೆಯ ಮನೆಯಲ್ಲಿದ್ದ ಹಣ, ಚಿನ್ನಾಭರಣ ಕಳ್ಳತನ ಮಾಡಿ ನೆಮ್ಮದಿಯಾಗಿದ್ದರು. ಕೊಲೆ ಮಾಡಿದ ನಾಲ್ಕು ದಿನಗಳ ನಂತರ ಮತ್ತೆ ವಾಪಸ್ ಬಂದು ಶವವನ್ನು ಪೆಟ್ರೋಲ್ ಹಾಕಿ ಸುಟ್ಟು ಗುರುತು ಸಿಗದಂತೆ ಮಾಡಿದ್ದರು. ನಂತರ ಏನು ಗೊತ್ತಿಲ್ಲದಂತೆ ವರ್ತಿಸುತ್ತಿದ್ದರು. ಆದರೆ ಪೊಲೀಸರು ವರ್ಷದ ನಂತರ ಇಬ್ಬರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಅರಣ್ಯದಲ್ಲಿ ಪತ್ತೆಯಾಗಿದ್ದ ಬುರುಡೆ ಮತ್ತು ಮೂಳೆಗಳ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು, ಸುಮಾರು ಒಂದು ವರ್ಷದ ನಂತರ ಮೃತ ಮಹಿಳೆಯ ಗುರುತು ಪತ್ತೆಹಚ್ಚಿ ಆರೋಪಿಗಳನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!