ಜನ ಮನದ ನಾಡಿ ಮಿಡಿತ

Advertisement

ತ್ರಿಶೂರ್: ಪಟಾಕಿ ಸಂಗ್ರಹಣಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟ….!

ಮುಂಡತಿಕ್ಕೋಡುವಿನ ಪಟಾಕಿ ಸಂಗ್ರಹಣಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 14 ಜನರು ಸಾವನ್ನಪ್ಪಿದ ನಂತರ, ತ್ರಿಶೂರ್ ಪೂರಂ ಉತ್ಸವದ ಪಟಾಕಿ ಪ್ರದರ್ಶನವನ್ನು ನಡೆಸುವ ಬಗ್ಗೆ ಸರ್ಕಾರವೇ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ದೇವಸ್ವಂಗಳ ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳದ ತ್ರಿಶೂರ್ ಜಿಲ್ಲೆಯ ಮುಂಡತ್ತಿಕೋಡ್‌ನಲ್ಲಿ ನಿನ್ನೆ ಸಂಭವಿಸಿದ ಪಟಾಕಿಗಳ ಸ್ಫೋಟದಲ್ಲಿ 14 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಈ ಸ್ಫೋಟವು ತಿರುವಾಂಬಾಡಿ ದೇವಸ್ಥಾನದ ಬಳಿ ಸಂಭವಿಸಿದೆ, ಇದೇ ತಿಂಗಳ 24 ರಂದು ನಡೆಯಲಿರುವ ತ್ರಿಶೂರ್ ಪೂರಂ ಹಬ್ಬದ ಪ್ರಯುಕ್ತ ಪಟಾಕಿಗಳನ್ನು ತಿರುವಾಂಬಾಡಿ ದೇವಸ್ಥಾನದ ಬಳಿ ಶೆಡ್ಡ್ ನಿರ್ಮಿಸಿ ಸಂಗ್ರಹಿಸಿ ಇಡಲಾಗಿತ್ತು. ಇದರಿಂದ ಸ್ಫೋಟ ಉಂಟಾಗಿ ಸುತ್ತಲೂ ಬೆಂಕಿ ಆವರಿಸಿದೆ.

ಬೆಂಕಿ ಹೊತ್ತಿಕೊಂಡ ಕೂಡಲೆ ಸಾಲುಸಾಲಾಗಿ ಪಟಾಕಿಗಳು ಸ್ಫೋಟಗೊಳ್ಳುವ ಸದ್ದು ಹಲವಾರು ಕಿಲೋಮೀಟರ್‌ಗಳವರೆಗೆ ಕೇಳಿಬರುತ್ತಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ. ಇಲ್ಲಿಯವರೆಗೆ ಸುಮಾರು 13 ಜನರನ್ನು ರಕ್ಷಿಸಲಾಗಿದೆ. ಗಾಯಾಳುಗಳಲ್ಲಿ 8 ಜನ ಗಂಭೀರ ಸ್ಥಿತಿಯಲ್ಲಿದ್ದಾರೆ. ಒಟ್ಟು 23 ಗಾಯಾಳುಗಳನ್ನು ತ್ರಿಶೂರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ಸಮಯದಲ್ಲಿ ಸುಮಾರು 30 ರಿಂದ 40 ಜನರು ಸ್ಥಳದಲ್ಲಿದ್ದರು ಎಂದು ಜಿಲ್ಲಾಧಿಕಾರಿ ಶಿಖಾ ಸುರೇಂದ್ರನ್ ಹೇಳಿದ್ದಾರೆ.

ಸ್ಫೋಟದ ನಿಖರವಾದ ಕಾರಣ ಸ್ಪಷ್ಟವಾಗಿಲ್ಲ. ರಕ್ಷಣಾ ಕಾರ್ಯಾಚರಣೆಗಳು ವೇಗದಲ್ಲಿ ಮುಂದುವರೆದಿದ್ದು, ಪೊಲೀಸ್, ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳು, ಆರೋಗ್ಯ ಇಲಾಖೆ, ಕಂದಾಯ ಅಧಿಕಾರಿಗಳು ಮತ್ತು ವಿಪತ್ತು ನಿರ್ವಹಣಾ ತಂಡಗಳು ಸೇರಿದಂತೆ ಹಲವಾರು ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ. ಪರವಾನಗಿ ಹೊಂದಿರುವ ಮುಂಡತಿಕ್ಕೋಡ್ ಸತೀಶ್ ಸೇರಿದಂತೆ ಗಾಯಗೊಂಡವರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!