ಜನ ಮನದ ನಾಡಿ ಮಿಡಿತ

Advertisement

ಬಳ್ಳಾರಿ: ಹೋಟೆಲ್‌ನಲ್ಲಿ ಏಕಾಏಕಿ ಬ್ಲಾಸ್ಟ್ ಆದ ಸಿಲಿಂಡರ್; ಬಾಲಕನಿಗೆ ಗಂಭೀರ ಗಾಯ..!

ಹೋಟೆಲ್‌ನಲ್ಲಿದ್ದ ಎರಡು ಸಿಲಿಂಡರ್ ಏಕಾಏಕಿ ಬ್ಲಾಸ್ಟ್ ಆದ ಪರಿಣಾಮ ಹೋಟೆಲ್ ಹೊತ್ತಿ ಉರಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆಯಲ್ಲಿ ನಡೆದಿದೆ.

ತೆಕ್ಕಲಕೋಟೆಯ ಈರಣ್ಣ ಎನ್ನುವವರಿಗೆ ಸೇರಿದ ಹೋಟೆಲ್‌ನಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಹೋಟೆಲ್‌ನಲ್ಲಿ ಈರಣ್ಣನ ಕುಟುಂಬಸ್ಥರು 9 ಜನ ಮಲಗಿದ್ದರು ಎನ್ನಲಾಗಿದೆ. 9 ಜನರ ಪೈಕಿ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ 10 ವರ್ಷದ ಶ್ರೀನಿವಾಸ್‌ಗೆ ಗಾಯಗಳಾಗಿವೆ. ಗಾಯಾಳು ಬಾಲಕನನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಉಳಿದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಹೋಟೆಲ್‌ನಲ್ಲಿನ ವಸ್ತುಗಳೆಲ್ಲವೂ ಸುಟ್ಟು ಕರಕಲಾಗಿದ್ದು, ಜೀವನೋಪಾಯಕ್ಕೆ ಇದ್ದ ಹೊಟೇಲ್‌ಗೆ ಬೆಂಕಿ ಬಿದ್ದಿದ್ದರಿಂದ ಹೋಟೆಲ್ ಮಾಲೀಕರು ಕಂಗಾಲಾಗಿದ್ದಾರೆ. ಸಿಲಿಂಡರ್ ಬ್ಲಾಸ್ಟ್ ಆದ ಹೋಟೆಲ್‌ನ ಅಕ್ಕಪಕ್ಕದ ಎರಡ್ಮೂರು ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದ ಪರಿಣಾಮ, ಟೈಯರ್ ಅಂಗಡಿಯೂ ಹೊತ್ತಿ ಉರಿದಿದೆ. ಘಟನೆ ಸಂಬಂಧ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

ಮಂಗಳೂರು: ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತು ಮಾರಾಟ..!

ಮಂಗಳೂರು: ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ; ಆರೋಪಿ ಬಂಧನ..!

ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಮೃತ್ತ್ಯು …!

ನೆಲಮಂಗಲ: ಕುಣಿಗಲ್ ಬೈಪಾಸ್‌ನಲ್ಲಿ ಆಂಬುಲೆನ್ಸ್ ಅಪಘಾತ…!

ಬಂಟ್ವಾಳ: ಪೊಳಲಿಯಲ್ಲಿ ವ್ಯಕ್ತಿ ಸಾವು ವಾರಸುದಾರರಿಗಾಗಿ ಮನವಿ…!

ಜೋಕಟ್ಟೆ: 21 ವರ್ಷದ ಯುವತಿ ಹಸೀನಾ ಖತೂನ್ ನಾಪತ್ತೆ…!

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು‌ ಭೇಟಿಯಾದ ಸಂತೋಷ್ ಪೈ…!

ಬಂಟ್ವಾಳ: ಬೈಕ್-ಸ್ಕೂಟರ್ ಡಿಕ್ಕಿ: 10 ವರ್ಷದ ಬಾಲಕಿ ಸಾವು…!

error: Content is protected !!