ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಓರ್ವ ಮೃ*ತ್ಯು..!

ಎರಡು ದಿನಗಳ ಹಿಂದೆ ಮಡಂತ್ಯಾರು ಸಮೀಪದ ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ.

ಪಾರೆಂಕಿ ನಿವಾಸಿ ಕೃಷ್ಣ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಎ.20 ರಂದು ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಮಾರಿಗುಡಿ ರಾಮನಗರ ಕ್ರಾಸ್ ಬಳಿಯಲ್ಲಿ ಸೈಪುದ್ದೀನ್ ಎಂಬಾತ ವಾಹನವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮಡಂತ್ಯಾರುವಿನಿಂದ ಬಳ್ಳಮಂಜ ಕಡೆಗೆ ಅಜಾಗರೂಕತೆಯಿಂದ ಹಾಗೂ ನಿರ್ಲಕ್ಷ್ಯತನದಿಂದ ಬೈಕ್‌ನ್ನು ಚಲಾಯಿಸಿಕೊಂಡು ಬಂದು ಬಳ್ಳಮಂಜ ಕಡೆಯಿಂದ ಮಡಂತ್ಯಾರು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ.

ಈ ಸಂದರ್ಭದಲ್ಲಿ ಇಬ್ಬರಿಗೂ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಕೃಷ್ಣ ಅವರನ್ನು ಮಂಗಳೂರು ಖಾಸಗಿ ಆಸ್ಪ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ, ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!