ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ರೈಲಿನಲ್ಲಿ ಹೆರಿಗೆ ; ಬೋಗಿಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ…!

ಕಾರವಾರ – ಮಂಗಳೂರು- ಬೆಂಗಳೂರು ಮಧ್ಯೆ ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಅದೇ ರೈಲಲ್ಲಿ ಪ್ರಯಾಣಿಸುತ್ತಿದ್ದ ಕೆಲವು ಮಹಿಳೆಯರು ಸೇರಿ ಹೆರಿಗೆ ಮಾಡಿಸಿದ ಘಟನೆ ಮಂಗಳೂರಿನ ಬಂಟ್ವಾಳ ಸಮೀಪದ ಬಿಸಿರೋಡ್ ಬಳಿ ನಡೆದಿದೆ.

ಮಂಗಳೂರು ಜಂಕ್ಷನ್‌ನಿಂದ ಹೊರಟ ರೈಲಿನಲ್ಲಿ ಮೈಸೂರು ಮೂಲದ ತುಂಬು ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿದೆ. ರೈಲು ಬಿ.ಸಿ.ರೋಡ್ ತಲುಪಿದಾಗ ಗರ್ಭಿಣಿಗೆ ತೀವ್ರ ರಕ್ತಸ್ರಾವವಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ರೈಲು ಸಂಚಾರವನ್ನು ಸ್ಥಗಿತಗೊಳಿಸಿ ಸುಮಾರು 30 ನಿಮಿಷಗಳ ಕಾಲ ವೈದ್ಯರಿಗಾಗಿ ಕಾಯಲಾಯಿತು.

ಆದರೆ ಸಕಾಲಕ್ಕೆ ವೈದ್ಯಕೀಯ ಚಿಕಿತ್ಸೆ ಲಭಿಸದ ಕಾರಣ ರೈಲಿನಲ್ಲಿದ್ದ ಇಬ್ಬರು ಮಹಿಳೆಯರು ಧೈರ್ಯದಿಂದಲೇ ಹೆರಿಗೆ ಮಾಡಿಸಲು ಮುಂದಾದರು. ತಕ್ಷಣ ಅವರು ರೈಲಿನ ಬೋಗಿಗೆ ಪರದೆ ಕಟ್ಟಿ ಹೆರಿಗೆಗಾಗಿ ಪ್ರಯತ್ನಿಸಿದರು. ರಕ್ತಸ್ರಾವವಾಗುತ್ತಿದ್ದರೂ ಧೃತಿಗೆಡದೆ ಪ್ರಯತ್ನ ಮುಂದುವರಿಸಿದರು. ಅವರೊಂದಿಗೆ ರೈಲಿನಲ್ಲಿದ್ದ ಇತರ ಮಹಿಳೆಯರೂ ಸಹಕರಿಸಿದರು. ಕೊನೆಗೂ ಸಹಜ ಹೆರಿಗೆ ಮಾಡಿಸುವಲ್ಲಿ ಮಹಿಳೆಯರ ತಂಡ ಯಶಸ್ವಿಯಾಯಿತು. ಬಳಿಕ ತಾಯಿ-ಮಗುವನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. **

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!