ಜನ ಮನದ ನಾಡಿ ಮಿಡಿತ

Advertisement

ಮುಂಬೈ: ಬಿರಿಯಾನಿ, ಕಲ್ಲಂಗಡಿ ಸೇವಿಸಿದ ಕುಟುಂಬದ ನಾಲ್ವರು ಸದಸ್ಯರು ಮೃತ್ಯು..! ಕಾರಣ..?

ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಬಿರಿಯಾನಿ, ಕಲ್ಲಂಗಡಿ ಸೇವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ವರದಿಯಾಗಿದೆ.

40 ವರ್ಷದ ಅಬ್ದುಲ್ಲಾ ಡೋಕಾಡಿಯಾ, ಅವರ ಪತ್ನಿ 35 ವರ್ಷದ ನಸೀನ್ ಡೋಕಾಡಿಯಾ, ಅವರ ಪುತ್ರಿಯರಾದ 16 ವರ್ಷದ ಆಯಿಶಾ ಹಾಗೂ 13 ವರ್ಷದ ಜೈನಾಬ್ ಮೃ*ತಪಟ್ಟವರು. ಏಪ್ರಿಲ್ 25ರಂದು ರಾತ್ರಿ ಸುಮಾರು 10:30ಕ್ಕೆ ಸಂಬಂಧಿಕರು ಸೇರಿದಂತೆ ಒಟ್ಟು ಒಂಬತ್ತು ಮಂದಿ ಒಟ್ಟಾಗಿ ಬಿರಿಯಾನಿ ಊಟ ಮಾಡಿದ್ದರು. ಊಟದ ನಂತರ ಸಂಬಂಧಿಕರು ತಮ್ಮ ಮನೆಗಳಿಗೆ ಮರಳಿದ್ದರು. ಆದರೆ ಅಬ್ದುಲ್ಲಾ ಅವರ ಕುಟುಂಬದ ನಾಲ್ವರು ಸದಸ್ಯರು ತಡರಾತ್ರಿ 1 ಗಂಟೆಯ ಬಳಿಕ ಕಲ್ಲಂಗಡಿ ಹಣ್ಣನ್ನು ಸೇವಿಸಿದ್ದರು ಎಂದು ತಿಳಿದುಬಂದಿದೆ. ಏಪ್ರಿಲ್ 26 ರ ಮುಂಜಾನೆ 5:30 ರ ಸುಮಾರಿಗೆ ನಾಲ್ವರಿಗೂ ತೀವ್ರ ವಾಂತಿ ಮತ್ತು ಬೇಧಿ ಶುರುವಾಗಿದೆ. ತಕ್ಷಣ ಅವರನ್ನು ವೈದ್ಯರ ಬಳಿ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ನಾಲ್ವರೂ ಕೊನೆಯುಸಿರೆಳೆದಿದ್ದಾರೆ. ಇನ್ನು ಇವರ ಸಾವಿನ ನಿಖರ ಕಾರಣವೇನು ಎಂಬುದು ತನಿಖೆಯಲ್ಲಿ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!