ಜನ ಮನದ ನಾಡಿ ಮಿಡಿತ

Advertisement

ಪ್ರಧಾನ ಮಂತ್ರಿ ಮೋದಿ ವಿರುದ್ಧ ಸಚಿವರ ಹೇಳಿಕೆ: ಡಾ. ಭರತ್ ಶೆಟ್ಟಿ ತೀವ್ರ ಖಂಡನೆ…!

ಪ್ರಧಾನ ಮಂತ್ರಿ ಮೋದಿ ವಿರುದ್ಧ ಸಚಿವರ ಹೇಳಿಕೆ: ಡಾ. ಭರತ್ ಶೆಟ್ಟಿ ತೀವ್ರ ಖಂಡನೆ.

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಅವಮಾನಕಾರಿ
ಕವನ ವಾಚಿಸಿ ಹೇಳಿಕೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಇದಕ್ಕೆ ಬಿಜೆಪಿ ಮುಖಂಡ ಡಾ. ಭರತ್ ಶೆಟ್ಟಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಾ. ಭರತ್ ಶೆಟ್ಟಿ, “ಸಚಿವ ಸ್ಥಾನದಲ್ಲಿರುವವರು ಈ ರೀತಿಯ ವೈಯಕ್ತಿಕ ಮತ್ತು ಅಸಭ್ಯ ಹೇಳಿಕೆಗಳನ್ನು ನೀಡುವುದು ಅತ್ಯಂತ ದುರದೃಷ್ಟಕರ. ಇದು ರಾಜಕೀಯ ಸಂಸ್ಕೃತಿಗೆ ಧಕ್ಕೆ ತರುವಂತದ್ದು,” ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾಡಿದ ಆರೋಪಗಳನ್ನು ತಳ್ಳಿಹಾಕಿದ ಅವರು, “ದೇಶದ ಅಭಿವೃದ್ಧಿಗೆ ಹಾಗೂ ಜನಸೇವೆಗಾಗಿ ಪ್ರಧಾನಮಂತ್ರಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ.
ಅವರ ಆಡಳಿತದಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ಹೆಮ್ಮೆಯ ಸ್ಥಾನ ಗಳಿಸಿದೆ,”

ಪ್ರಧಾನಿಯವರು ಮಹಿಳೆಯರ ಹಕ್ಕಿಗೆ ಸಂಸತ್ತಿನಲ್ಲಿ ಮಸೂದೆ ಮಂಡಿಸಿದವರು.
ಅದನ್ನು ಬೆಂಬಲಿಸಲು ಯೋಗ್ಯತೆ ಇಲ್ಲದ ಕಾಂಗ್ರೆಸ್ ಮೋದಿ ಜೀವನದ ಬಗ್ಗೆ ಮಾತನಾಡುತ್ತದೆ
ಎಂದು ಅಭಿಪ್ರಾಯಪಟ್ಟರು. ವೈಯಕ್ತಿಕ ಜೀವನದ ಮೇಲೆ ದಾಳಿ ನಡೆಸುವುದು ಅಸಭ್ಯ ರಾಜಕೀಯದ ಉದಾಹರಣೆ,” ಎಂದು ಅವರು ಹೇಳಿದರು.

ಸಚಿವ ಶಿವರಾಜ್ ತಂಗಡಗಿ ಅವರು ತಮ್ಮ ಹೇಳಿಕೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ಡಾ. ಶೆಟ್ಟಿ, “ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡಲಾಗುತ್ತಿದೆ,” ಎಂದು ಟೀಕಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!